ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗಿದೆ. ಅಧಿವೇಶನದ ಮೊದಲ ದಿನವಾದ ಸೋಮವಾರ ನೂತನ ಸಂಸದರ ಪ್ರಮಾಣವಚನ ನೆರವೇರಿತು.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ನೂತನ ಸಂಸದರು ಪ್ರಮಾಣ ವಚನ ಸ್ವೀಕರಿಸಿದರು.
ಹಂಗಾಮಿ ಸ್ಪೀಕರ್ ಆಗಿ ನೇಮಕಗೊಂಡಿರುವ ಬಿಜೆಪಿಯ ಹಿರಿಯ ನಾಯಕ ಭರ್ತೃಹರಿ ಮಹತಾಬ್ ಅವರು ಪ್ರಮಾಣ ವಚನ ಬೋಧಿಸಿದರು. ಕರ್ನಾಟಕವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿ ಗಮನಸೆಳೆದರು.
ಈ ಕುರಿತಂತೆ ಸಾಮಾಜಿಕ ಜಾಲತಾಣ ‘X’ನಲ್ಲಿ ಪೋಸ್ಟ್ ಹಾಕಿರುವ ಕುಮಾರಸ್ವಾಮಿ, ಸಭಾಧ್ಯಕ್ಷರಾದ ಭರ್ತೃಹರಿ ಮಹತಾಬ್ ಅವರ ಸಮಕ್ಷಮದಲ್ಲಿ ನನ್ನ ಮಾತೃಭಾಷೆಯಾದ ಕನ್ನಡಲ್ಲಿ ಪ್ರಮಾಣ ಸ್ವೀಕರಿಸಿದೆ. ಇದು ನನ್ನ ಬದುಕಿನ ಅವಿಸ್ಮರಣೀಯ, ಹೆಮ್ಮೆಯ ಕ್ಷಣ. ಭಾರತದ ಪ್ರಜಾಪ್ರಭುತ್ವ ದೇಗುಲದಲ್ಲಿ ಈ ಧನ್ಯತೆಯ ಕ್ಷಣಕ್ಕೆ ಕಾರಣೀಭೂತರಾದ ಮಂಡ್ಯ ಲೋಕಸಭೆ ಕ್ಷೇತ್ರದ ಎಲ್ಲಾ ತಂದೆ ತಾಯಂದಿರು, ಅಣ್ಣ ತಮ್ಮಂದಿರು, ಅಕ್ಕ ತಂಗಿಯರು ಹಾಗೂ ಸಮಸ್ತ ಕನ್ನಡಿಗರಿಗೆ ಅನಂತ ಧನ್ಯವಾದಗಳನ್ನು ಅರ್ಪಣೆ ಮಾಡುತ್ತೇನೆ’ ಎಂದಿದ್ದಾರೆ.
18ನೇ ಲೋಕಸಭೆಯ ಸದಸ್ಯನಾಗಿ, ಮಂಡ್ಯ ಮಹಾಜನತೆಯ ಪ್ರತಿನಿಧಿಯಾಗಿ ಗೌರವಾನ್ವಿತ ಹಂಗಾಮಿ ಸಭಾಧ್ಯಕ್ಷರಾದ ಶ್ರೀ ಭರ್ತೃಹರಿ ಮಹತಾಬ್ ಅವರ ಸಮಕ್ಷಮದಲ್ಲಿ ನನ್ನ ಮಾತೃಭಾಷೆಯಾದ ಕನ್ನಡಲ್ಲಿ ಪ್ರಮಾಣ ಸ್ವೀಕರಿಸಿದೆ. ಇದು ನನ್ನ ಬದುಕಿನ ಅವಿಸ್ಮರಣೀಯ, ಹೆಮ್ಮೆಯ ಕ್ಷಣ.
ಭಾರತದ ಪ್ರಜಾಪ್ರಭುತ್ವ ದೇಗುಲದಲ್ಲಿ ಈ ಧನ್ಯತೆಯ ಕ್ಷಣಕ್ಕೆ ಕಾರಣೀಭೂತರಾದ ಮಂಡ್ಯ… pic.twitter.com/uH4sDqutDM
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 24, 2024






















































