ಹೊಸದಿಲ್ಲಿ: 18ನೇ ಲೋಕಸಭೆಯ ನೂತನ ಸ್ಪೀಕರ್ ಆಗಿ ಬಿಜೆಪಿ ಸಂಸದ ಓಂ ಬಿರ್ಲಾ ಆಯ್ಕೆಯಾಗಿದ್ದಾರೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೊದಲ ಅಧಿವೇಶನದ ಆರಂಭದಲ್ಲೇ ಸೋಲಿನ ರುಚಿ ತೋರಿಸುವ ‘ಇಂಡಿಯಾ’ ಪ್ರಯತ್ನ ವಿಫಲವಾಗಿದೆ.
Om Birla Ji once again Re-elected Loksabha Speaker 🔥pic.twitter.com/0L52swLSyH
— Right Singh (@rightwingchora) June 26, 2024
ಬುಧವಾರ ಸ್ಪೀಕರ್ ಆಯ್ಕೆ ಪ್ರಕ್ರಿಯೆ ನಡೆಯಿತು. ಬಿಜೆಪಿ ಸಂಸದ ಓಂ ಬಿರ್ಲಾ ಹಾಗೂ ಕಾಂಗ್ರೆಸ್‌ನ ಹಿರಿಯ ಸಂಸದ ಕೆ.ಸುರೇಶ್ ನಡುವೆ ಸ್ಪರ್ಧೆ ಏರ್ಪಟ್ಟಿತ್ತು. ಆದರೆ ಬಹುಮತವಿರುವ ಆಡಳಿತಾರೂಢ NDA ಅಭ್ಯರ್ಥಿ ಓಂ ಬಿರ್ಲಾ ಅವರು ಧ್ವನಿ ಮತದ ಮೂಲಕ ಗೆದ್ದು ಎರಡನೇ ಅವಧಿಗೆ ಸ್ಪೀಕರ್ ಆಗಿ ಆಯ್ಕೆಯಾದರು.
ನೂತನ ಸಭಾಧ್ಯಕ್ಷರಿಗೆ ಪ್ರಧಾನಿ ಮೋದಿ ಅವರು ಸೇರಿದಂತೆ ಸಂಪುಟ ಸದಸ್ಯರು, ಸಂಸದರು ಅಭಿನಂಧಿಸಿದರು. ಓಂ ಬಿರ್ಲಾ ಅವರು ರಾಜಸ್ಥಾನದ ಕೋಟಾದಿಂದ ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಕಳೆದ ಲೋಕಸಭೆಯಲ್ಲೂ ಅವರು ಸ್ಪೀಕರ್ ಆಗಿ ಸದನವನ್ನು ಮುನ್ನಡೆಸಿದ್ದರು.





































































