ನವದೆಹಲಿ: ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಸಿಎಂ ಸಿದ್ದರಾಮಯ್ಯ ಅವರು ತಲಾ 2 ಲಕ್ಷ ರೂಪಾಯಿ ಪರಿಹಾರ ಪ್ರಕಟಿಸಿದ್ದಾರೆ.
ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಪೂನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಬೆಳಿಗ್ಗೆ ನಿಂತಿದ್ದ ಲಾರಿಗೆ ಹಿಂಬದಿಯಿಂದ ಟಿಟಿ ಡಿಕ್ಕಿಯಾಗಿ 13 ಜನ ಸಾವನ್ನಪ್ಪಿದ್ದರು.
ಈ ಅಪಘಾತ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ ಮೃತರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ. ಇದೇ ವೇಳೆ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುದ ಅವರು, ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ನೀಡುವುದಾಗಿ ಪ್ರಕಟಿಸಿದ್ದಾರೆ