ಬೆಂಗಳೂರು: ಬೆಂಗಳೂರು ಮಹಾನಗರದಲ್ಲಿ ಆಸ್ತಿ ತೆರಿಗೆ ಹೆಚ್ಚಳವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತಂತೆ ಯಾವುದೇ ನಿರ್ಧಾರವಾಗಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳವಾಗಿದೆ ಎಂಬ ಮಾಧ್ಯಮ ವರದಿಗಳು ಸುಳ್ಳು. ಯಾವುದೇ ಏರಿಕೆ ಮಾಡಿಲ್ಲ ಮತ್ತು ಸದ್ಯದಲ್ಲಿಯೇ ಆಸ್ತಿ ತೆರಿಗೆಯನ್ನು ಹೆಚ್ಚಿಸುವ ಉದ್ದೇಶ ನಮಗಿಲ್ಲ. ಇವು ಕೇವಲ ವದಂತಿಗಳು ಮತ್ತು ಈ ಹೇಳಿಕೆಗಳಲ್ಲಿ ಯಾವುದೇ ಸತ್ಯವಿಲ್ಲ ಎಂದು ಡಿ.ಕೆ.ಶಿವಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಗೆ ಒನ್ ಟೈಮ್ ಸೆಟಲ್ಮೆಂಟ್ ಸ್ಕೀಮ್ (OTS) ಅನ್ನು ಜಾರಿಗೊಳಿಸಲಾಗಿದೆ. ಈ ಯೋಜನೆಯ ಪ್ರಯೋಜನಗಳನ್ನು ಜುಲೈ 31ರವರೆಗೆ ಪಡೆಯಬಹುದು, ನಂತರ ಯಾವುದೇ ಸಂದರ್ಭದಲ್ಲಿ ವಿಸ್ತರಣೆಯನ್ನು ನೀಡಲಾಗುವುದಿಲ್ಲ ಎಂದು ಡಿಕೆಶಿ ಅವರು ಸಾಮಾಜಿಕ ಜಾಲತಾಣ’X’ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
The media reports of an increase in property tax under BBMP are false. There has been no hike and we have no intention to increase the property tax in the near future. Please be assured that these are mere rumours and there is no truth to these claims.
Furthermore, the One Time…
— DK Shivakumar (@DKShivakumar) July 3, 2024