ಚೆನ್ನೈ: ತಮಿಳುನಾಡು ರಾಜ್ಯದ ಬಹುಜನ ಸಮಾಜವಾದಿ ಪಕ್ಷದ ಅಧ್ಯಕ್ಷ ಕೆ ಆರ್ಮ್‌ಸ್ಟ್ರಾಂಗ್ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ.
ಸೆಂಬಿಯಮ್‌ನ ವೇಣುಗೋಪಾಲ್ ಸ್ಟ್ರೀಟ್‌ನಲ್ಲಿತಮ್ಮ ಪಕ್ಷದ ಕಾರ್ಯಕರ್ತರೊಂದಿಗೆ ಸಂಜೆ 7 ಗಂಟೆ ಸುಮಾರಿಗೆ ಕಟ್ಟಡ ನಿರ್ಮಾಣ ಕಾರ್ಯವನ್ನು ನೋಡಿಕೊಳ್ಳುತ್ತಿದ್ದಾಗ ಎರಡು ಬೈಕ್‌ಗಳಲ್ಲಿ ಬಂದ ಆರು ಮಂದಿಯ ತಂಡ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದೆ,
ಭೀಕರ ದಾಳಿಗೆ ತತ್ತರಿಸಿದ ಆರ್ಮ್‌ಸ್ಟ್ರಾಂಗ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರಲ್ಲೇ ಅವರು ಮೃತಪಟ್ಟಿದ್ದರು. ಆರ್ಮ್‌ಸ್ಟ್ರಾಂಗ್ ಜೊತೆಗಿದ್ದ ಇಬ್ಬರ ಮೇಲೂ ದಾಳಿ ನಡೆದಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಕರಣ ದಾಖಲಿಸಿರುವ ಪೊಲೀಸರು ಹಂತಕರನ್ನು ಬಂಧಿಸಲು 10 ವಿಶೇಷ ತಂಡಗಳನ್ನು ರಚಿಸಿದ್ದಾರೆ.