ಬೆಂಗಳೂರು: ವಾಲ್ಮೀಕಿ ನಿಗಮ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನಿವಜಾರಿ ನಿರ್ದೇಶನಾಲಯ ಅಧಿಕಾರಿಗಳು ವಶಕ್ಕೆ ಪೆಡೆದಿದ್ದಾರೆ.
ಕರ್ನಾಟಕ ವಾಲ್ಮಿಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ನೂರಾರು ಕೋಟಿ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿರುವ ಪ್ರಕರಣದಲ್ಲಿ ಈಗಾಗಲೇ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹಾಗೂ ಅಕೌಂಟೆಂಟ್ ಬಂಧನವಾಗಿದ್ದು, ಇದೀಗ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನೂ ಇಡಿ.ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಕೆದೆರಡು ದಿನಗಳಲ್ಲಿ ವಾಲ್ಮಿಕಿ ಹಗರಣ ಸಂಬಂಧ ಶಾಸಕರಾದ ನಾಗೇಂದ್ರ, ದದ್ದಲ್ ಹಾಗೂ ಅವರ ಆಪ್ತರ ನಿವಾಸಗಳಿಗೆ ದಾಳಿ ಮಾಡಿ ಪರಿಶೀಲನೆ ನಡೆಸಿದೆ. ಜೊತೆಗೆ ಪ್ರಮುಖರನ್ನು ವಿಚಾರಣೆಗೆ ಗುರಿಪಡಿಸಿದೆ. ಇದಾದ ಬೆನ್ನಲ್ಲೇ ಬಿ.ನಾಗೇಂದ್ರ ಅವರನ್ನು ಇ.ಡಿ.ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.