ನವದೆಹಲಿ: ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಇ.ಡಿ.ಅಧಿಕಾರಿಗಳು ಬಂಧಿಸಿದ್ದು, ಜೈಲಿನಲ್ಲಿರುವ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಪುರಸ್ಕರಿಸಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಹಾಗೂ ದೀಪಂಕರ್ ದತ್ತ ಅವರಿದ್ದ ಪೀಠವು, ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಸುಪ್ರೀಂ ಕೋರ್ಟ್ ನ್ಯಾಯಪೀಠವು ಜಾರಿ ಇದೇ ವೇಳೆ, ಇ.ಡಿ.ಅಧಿಕಾರಿಗಳು ತಮ್ಮನ್ನು ಬಂಧಿಸಿರುವ ಕ್ರಮವನ್ನು ಪ್ರಶ್ನಿಸಿ ಸಿಎಂ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಪೀಠವು, ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ.
ಈ ನಡುವೆ, ಭ್ರಷ್ಟಾಚಾರ ಪ್ರಕರಣ ಹಿನ್ನೆಲೆಯಲ್ಲಿ ಸಿಬಿಐನಿಂದಲೂ ಬಂಧನಕ್ಕೊಳಗಾಗಿರುವ ಅರವಿಂದ್ ಕೇಜ್ರಿವಾಲ್, ಈ ಪ್ರಕರಣದಲ್ಲೂ ಜಾಮೀನು ಪಡೆಯಬೇಕಿದೆ. ಆವರೆಗೂ ಬಿಡುಗಡೆ ಭಾಗ್ಯ ಇಲ್ಲ






































































