ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹಾದಿ ಸುಲಭವಾದಂತಿಲ್ಲ. ಪ್ರಕರಣ ರದ್ದುಗೊಳಿಸಬೇಕೆಂಬ ಡಿಕೆಶಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿಲ್ಲ.
ತಮ್ಮ ವಿರುದ್ದದ ಸಿಬಿಐ ಪ್ರಕರಣ ದಾಖಲಿಸಿರುವುದನ್ನು ಪ್ರಶ್ನಿಸಿ ಡಿ ಕೆ ಶಿವಕುಮಾರ್ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ಈ ಅರ್ಜಿ ಕುರಿತಂತೆ ಸೋಮವಾರ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಎಸ್ ಸಿ ಶರ್ಮಾ ಅವರನ್ನೊಳಗೊಂಡ ನ್ಯಾಯಪೀಠವು ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದಿದೆ.
ಸಿಬಿಐ ದಾಖಲಿಸಿಕೊಂಡಿರುವ ಪ್ರಕರಣವನ್ನು ರದ್ದುಗೊಳಿಸಲು ನಿರಾಕರಿಸಿದ ಪೀಠ ಡಿಕೆಶಿ ಮನವಿಯನ್ನು ತಳ್ಳಿಹಾಕಿತು.