ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರಲಿದೆ. 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವ ತೀರ್ಮಾನವನ್ನು ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಈ ಮೂಲಕ ರಾಜ್ಯದ ಲಕ್ಷಾಂತರ ನೌಕರರ ವೇತನ ಶೇಕಡಾ 27.5ರಷ್ಟು ಹೆಚ್ಚಳವಾಗಲಿದೆ.
ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ . 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವ ಬಗ್ಗೆ ಚರ್ಚೆ ನಡೆದಿದೆ. ಆಗಸ್ಟ್ 1 ರಿಂದ ಜಾರಿಗೊಳಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು.
ಈ ನಡುವೆ, . 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸದಿದ್ದರೆ ಜುಲೈ 29ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲು ರಾಜ್ಯ ಸರ್ಕಾರಿ ನೌಕರರ ಸಂಘ ನಿರ್ಧರಿಸಿತ್ತು. ಇದೀಗ ಸರ್ಕಾರದ ತೀರ್ಮಾನ ನೌಕರ ವೃಂದದಲ್ಲಿ ಸಂತಸ ತಂದಿದೆ.