ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಸಿರುವ ವಾಲ್ಮಿಕಿ ನಿಗಮ ಹಗರಣದಲ್ಲಿ ಮತ್ತಷ್ಟು ಆರೋಪಿಗಳ ಬಂಧನವಾಗಿದೆ. ಹಗರಣದಲ್ಲಿ ಪ್ರಮುಖನೆನ್ನಲಾದ ಮತ್ತೊಬ ವ್ಯಕ್ತಿಯನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ.
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಕಿ ಶ್ರೀನಿವಾಸ್ ರಾವ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಎಸ್ಐಟಿ ಮೂಲಗಳು ತಿಳಿಸಿವೆ. ವಿಜಯವಾಡ ಮೂಲ್ ಶ್ರೀನಿವಾಸ್ ರಾವ್ ಕಳೆದರೆಡು ವರ್ಷಗಳಿಂದ ಬೆಂಗಳೂರಿನ ಯಶವಂತಪುರದ ಬಳಿ ವಾಸವಿದ್ದಾನೆ ಎನ್ನಲಾಗಿದೆ.
ಈತ ಅಕ್ರಮ ಹಣ ಸಾಗಾಣಿಕೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಎಂಬ ಮಾಹಿತಿಯನ್ನು ಎಸ್ಐಟಿ ಪೇರಿಸಿದೆ. ಹಗರಣ ಬೆಳಕಿಗೆ ಬರುತ್ತಿದ್ದಂತೆ ಶ್ರೀನಿವಾಸ್ ತಲೆಮರೆಸಿಕೊಂಡಿದ್ದ. ಈತನ ಪತ್ತೆಗಾಗಿ ಕಾರ್ಯಾಚರಣೆಗಿಳಿದ ಎಸ್‌ಐಟಿ ಪೊಲೀಸರು, ಬಾಧಿಸುವಲ್ಲಿ ಯಶಸ್ವಿಯಾಗಿದೆ. ಆರೋಪಿಯನ್ನು ಕೋರ್ಟ್‌ಗೆ ಹಾಜರುಪಡಿಸಿರುವ ಎಸ್ಐಟಿ ಹೆಚ್ಚಿನ ತನಿಖೆಗಾಗಿ 9 ದಿನಗಳ ಕಾಲ ತನ್ನ ಕಸ್ಟಡಿಗೆ ಪಡೆದಿದೆ.