ಕಾರವಾರ: ಕರಾವಳಿಯಲ್ಲಿ ಮಳೆ ಆರ್ಭಟ ಜೋರಾಗಿದ್ದು, ಉತ್ತರಕನ್ನಡ ಜಿಲ್ಲೆ ಅಂಕೋಲಾ ಬಳಿ ಗುಡ್ಡ ಕುಸಿದು ಭೀಕರ ಅವಘಡ ಸಂಭವಿಸಿದೆ.
ಅಂಕೋಲ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿದಿದ್ದು ಅನೇಕರು ಜೀವಂತ ಸಮಾಧಿಯಾಗಿದ್ದಾರೆ. 10ಕ್ಕೂ ಹೆಚ್ಚು ಜನರು ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಮಂಗಳವಾರ ಸಂಭವಿಸಿರುವ ಈ ಅವಘಡದಲ್ಲಿ ಈವರೆಗೆ ಐವರ ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು ಇನ್ನುಳಿದವರಿಗಾಗಿ ಹುಡುಕಾಟ ಸಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಲವಾರು ಜೆಸಿಬಿಗಳ ಮೂಲಕ ಮಣ್ಣನ್ನು ತೆರವು ಮಾಡಿ ಲಾರಿಗಳ ಮೂಲಕ ಸಾಗಿಸಲಾಗುತ್ತಿದೆ. ಈ ಅವಘಡದಿಂದಾಗಿ ಈ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ತಬ್ಧವಾಗಿದೆ.


























































