ಕಾರವಾರ: ಕರಾವಳಿಯಲ್ಲಿ ಮಳೆ ಆರ್ಭಟ ಜೋರಾಗಿದ್ದು, ಉತ್ತರಕನ್ನಡ ಜಿಲ್ಲೆ ಅಂಕೋಲಾ ಬಳಿ ಗುಡ್ಡ ಕುಸಿದು ಭೀಕರ ಅವಘಡ ಸಂಭವಿಸಿದೆ.
ಅಂಕೋಲ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಗುಡ್ಡ ಕುಸಿದಿದ್ದು 10ಕ್ಕೂ ಹೆಚ್ಚು ಜನರು ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಈ ಅವಘಡದಲ್ಲಿ ಈವರೆಗೆ ಐವರ ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು ಇನ್ನುಳಿದವರಿಗಾಗಿ ಹುಡುಕಾಟ ಸಾಗಿದೆ. ಈ ನಡುವೆ, ಮೃತಪಟ್ಟವರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ.