ಮಂಗಳೂರು: ಕರಾವಳಿಯಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರಿದಿದ್ದು, ನಿರಂತರ ಮಳೆಯ ನಡುವೆಯೇ ಸರಣಿ ಅವಘಡಗಳು ಸಂಭವಿಸುತ್ತಿವೆ. ಇದೇ ವೇಳೆ, ವಿದ್ಯುತ್ ತಂತಿ ಸ್ಪರ್ಶಿಸಿ ಸಿಎ ವಿದ್ಯಾರ್ಥಿನಿ ಸಾನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದಲ್ಲಿ ಸಂಭವಿಸಿದೆ.
ಮಂಗಳೂರು ಹೊರವಲಯದ ಗುರುಪುರದಲ್ಲಿ ಶುಕ್ರವಾರ ಬೆಳಿಗ್ಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ 21 ವರ್ಷ ವಯಸ ಅಶ್ವಿನಿ ಶೆಟ್ಟಿ ಎಂಬ ಯುವತಿ ಮೃತಪಟ್ಟಿದ್ದಾರೆ. ಕಲ್ಲಕಲಂಬಿ ನಿವಾಸಿ ಹರೀಶ್ ಎಂಬವರ ಪುತ್ರಿಯಾಗಿರುವ ಈಕೆ ಮಂಗಳೂರಿನ ಕಾಲೇಜಿನಲ್ಲಿ ಸಿಎ ವ್ಯಾಸಾಂಗ ಮಾಡುತ್ತಿದ್ದರೆನ್ನಲಾಗಿದೆ.


















































