ತನ್ನ ಪತ್ನಿ ಬೇರೆಯವರೊಂದಿಗೆ ಫೋನ್‌ನಲ್ಲಿ ಮಾತನಾಡಿದ್ದರಿಂದ ಕುಪಿತನಾದ ಗಂಡ ಈ ಕೃತ್ಯ ನಡೆಸಿ ಪೊಲೀಸರ ಅತಿಥಿಯಾಗಿದ್ದಾನೆ. ಕೊಡಗು ಜಿಲ್ಲೆ ಮಡಿಕೇರಿಯಲ್ಲೊಬ್ಬ ಭೂಪ ತನ್ನ ಪತ್ನಿಯನ್ನು ಗುಂಡಿಕ್ಕಿ ಕೊಲೆ ಮಾಡಿದ್ದಾನೆ.
ವಿರಾಜಪೇಟೆ ತಾಲೂಕಿನ ಬೇಟೋಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆ 40 ವರ್ಷದ ಶಿಲ್ಪಾ ಸೀತಮ್ಮ ಅವರನ್ನು ಪತಿ ಬೋಪಣ್ಣ ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತನ್ನ ಪತ್ನಿ ಫೋನ್‌ನಲ್ಲಿ ಬೇರೆಯವರೊಂದಿಗೆ ಮಾತನಾಡುತ್ತಿದ್ದುದ್ದಕ್ಕೆ ಗಂಡ ಆಕ್ಷೇಪಿಸಿದ್ದು, ಇಬ್ಬರ ನಡುವೆ ಜಗಳ ವಿಕೋಪಕ್ಕೆ ತಿರುಗಿ ಪತಿ ಗುಂಡಿಕ್ಕಿ ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಹತ್ಯೆ ಮಾಡಿದ ನಂತರ ಆರೋಪಿ ತಾನಾಗಿಯೇ ಪೊಲೀಸರಿಗೆ ಶರಣಾಗಿದ್ದಾನೆ ಎನ್ನಲಾಗಿದೆ.