ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಹೆಸರನ್ನು ಉಲ್ಲೇಖಿಸಲು ಅಧಿಕಾರಿಗಳ ಮೇಲೆ ಇಡಿ ಒತ್ತಡ ಹೇರುತ್ತಿದೆ ಎಂದು ಆರೋಪಿಸಿ ದಾಖಲಾಗಿರುವ ಎಫ್ಐಆರ್ಗೆ ಹೈಕೋರ್ಟ್ ತಡೆ ನೀಡಿದೆ.
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮದಲ್ಲಿ ಬಂಧಿತ ಮಾಜಿ ಸಚಿವ ನಾಗೇಂದ್ರ ಅವರ ಹೆಸರು ಹೇಳುವಂತೆ ಇಡಿ ಅಧಿಕಾರಿಗಳು ಒತ್ತಡ ಹೇರಿದ್ದಾರೆಂದು ಆರೋಪಿಸಿ ರಾಜ್ಯ ಸರ್ಕಾರದ ಅಧಿಕಾರಿ ಬೆಂಗಳೂರಿನ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಎಫ್ಐಆರ್ ಪ್ರಶ್ನಿಸಿ ಜಾರಿ ನಿರ್ದೇಶನಾಲಯದ ಇಬ್ಬರು ಅಧಿಕಾರಿಗಳು ಹೈಕೋರ್ಟ್ ಮೊರೆ ಹೋಗಿದ್ದಾರೆ. ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ಹೈಕೋರ್ಟ್, ಇಡಿ ಅಧಿಕಾರಿಗಳ ವಿರುದ್ಧದ ಎಫ್ಐಆರ್ಗೆ ತಡೆ ನೀಡಿ ಆದೇಶಿದೆ.
ಹಗರಣದ ತನಿಖೆಯ ಹಾದಿ ತಪ್ಪಿಸುವ ಉದ್ದೇಶದಿಂದ ಈ ದೂರು ನೀಡಲಾಗಿದೆ ಎಂದು ಇಡಿ ತನ್ನ ಅರ್ಜಿಯಲ್ಲಿ ಹೈಕೋರ್ಟ್ ಗಮನಸೆಳೆದಿದ್ದಾರೆ. ಈ ಆರೋಪ ಬಗ್ಗೆ ಪೊಲೀಸರು ಪರಿಶೀಲನೆ ನಡೆಸದೆ ಎಫ್ಐಆರ್ ದಾಖಲಿಸಿದ್ದಾರೆ. ಹೀಗಾಗಿ ಎಫ್ಐಆರ್ಗೆ ತಡೆ ನೀಡಬೇಕೆಂದು ಇಡಿ ಮನವಿ ಮಾಡಿತ್ತು.