ಚಿಕ್ಕಮಗಳೂರು : ಕರಾವಳಿ ಮಲೆನಾಡಿನಲ್ಲಿ ಮುಂಗಾರು ಮಳೆ ಮುಂದುವರಿದಿದ್ದು, ನಿರಂತರ ಮಳೆಯಿಂದಾಗಿ ಜನರ ಪರದಾಟ ನಿಂತಿಲ್ಲ. ಈ ನಡುವೆ, ಭಾರೀ ಮಳೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗುರುವಾರ (ಜುಲೈ 25) ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ತಾಲೂಕುಗಳ ಅಂಗನವಾಡಿ ,ಪ್ರಾಥಮಿಕ , ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.