ಬೆಂಗಳೂರು: ನಾಯಿ ಹಾಗೂ ಇತರೆ ಪ್ರಾಣಿಗಳ ಮಾಂಸವನ್ನು ಜೈಪುರದಿಂದ ತಂದು ಹೋಟೆಲ್‌ಗಳಿಗೆ ಪೂರೈಸಲಾಗುತ್ತಿದೆ ಎಂಬ ಆರೋಪ ಹಿನ್ನೆಲೆಯಲ್ಲಿ ಮಾಂಸ ಮಾದರಿಯ ಪರೀಕ್ಷೆ ನಡೆಸಲು ಎಫ್‌ಎಸ್‌ಎಸ್‌ಎಐ (ಭಾರತೀಯ ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ) ಕ್ರಮ ಕೈಗೊಂಡಿದೆ,
ಶುಕ್ರವಾರ ಜೈಪುರ– ಮೈಸೂರು ಎಕ್ಸ್‌ಪ್ರೆಸ್ ರೈಲು ಮೂಲಕ ಬೆಂಗಳೂರಿಗೆ ಕುರಿ ಮಾಂಸದ ಜತೆಗೆ ನಾಯಿ ಮಾಂಸವನ್ನೂ ಮಿಶ್ರಣ ಮಾಡಿ ತರಲಾಗಿದೆ ಎಂಬ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಎಫ್‌ಎಸ್‌ಎಸ್‌ಎಐ ಈ ಕ್ರಮಕ್ಕೆ ಮುಂದಾಗಿದೆ.
ಕುರಿ ಮತ್ತು ಇತರೆ ಪ್ರಾಣಿಗಳ ಮಾಂಸವು ಸರಬರಾಜು ಆಗುತ್ತಿರುವ ಆರೋಪ ಕುರಿತಂತೆ ಪೋಲಿಸ್ ಇಲಾಖೆ ಜೊತೆ ತಪಾಸಣೆ ನಡೆಸಿದ್ದು, ಪ್ರಯೋಗಾಲಯದ ವರದಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.



















































