ಶಿಮ್ಲಾ: ಉತ್ತರ ಹಾಗೂ ಈಶಾನ್ಯ ರಾಜ್ಯಗಳಲ್ಲೂ ಮುಂಗಾರು ಮಳೆ ಅವಾಂತರಗಳನ್ನು ಸೃಷ್ಟಿಸಿದೆ.
ಭಾರೀ ಮಳೆಗೆ ತತ್ತರಿಸಿರುವ ಹಿಮಾಚಲ ಪ್ರದೇಶದಲ್ಲಿ ಸರಣಿ ಭೂಕುಸಿತದ ಘಟನೆಗಳು ಸಂಭವಿಸಿವೆ.
ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು, ಭೂಕುಸಿತದಿಂದಾಗಿ ಹಿಮಾಚಲ ಪ್ರದೇಶದಲ್ಲಿ ಸುಮಾರು 120 ರಸ್ತೆಗಳು ಬಂದ್ ಆಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
























































