ಚೆನ್ನೈ: ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ತಿರುತ್ತಣಿ ಬಳಿಯೂ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಕಾಲೇಜು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ವಿದ್ಯಾರ್ಥಿಗಳಿದ್ದ ಕಾರು ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿ ಈ ಅಪಘಾತ ಘಟಿಸಿದೆ.
ಚೆನ್ನೈನ ಕಾಲೇಜಿನಲ್ಲಿ ಓದುತ್ತಿದ್ದ ಏಳು ಮಂದಿ ವಿದ್ಯಾರ್ಥಿಗಳು ಚೆನ್ನೈ-ತಿರುಪತಿ ಹೆದ್ದಾರಿಯಲ್ಲಿಕಾರಿನಲ್ಲಿ ತೆರಳುತ್ತಿದ್ದಾಗ ಟ್ರಕ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ನಡುವೆ ಅಪಘಾತಕ್ಕೆ ಕಾರಣ ಎನ್ನಲಾದ ಟ್ರಕ್ ಚಾಲಕನನ್ನು ಕನಗಮ್ಮಛತ್ರಂ ಪೊಲೀಸರು ಬಂಧಿಸಿದ್ದಾರೆ.