ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆಯು ಕ್ರಾಂತಿಕಾರಿ ಕ್ರಮಗಳಿಗೆ ಮುನ್ನುಡಿ ಬರೆದಿದೆ. ಆಟೋಮೇಟೆಡ್ ಟೆಸ್ಟಿಂಗ್ ಸ್ಟೇಷನ್‌ಗಳು ಹೊಸ ಆಯಾಮ ನೀಡಲಿದ್ದು, ಜೊತೆಗೆ ವೆಹಿಕಲ್ ಲೊಕೇಶನ್ ಟ್ರ್ಯಾಕಿಂಗ್ ಸಿಸ್ಟಂ ಶೀಘ್ರ ಜಾರಿಯಾಗಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
2024-25ನೇ ಸಾಲಿನ ರಾಜಸ್ವ ಸಂಗ್ರಹಣೆ ವಿವರ:
-
ವಾರ್ಷಿಕ ರಾಜಸ್ವ ಗುರಿ- ರೂ.13000ಕೋಟಿಜುಲೈ 2024ರ ಅಂತ್ಯಕ್ಕೆ ಸಂಗ್ರಹಿಸಬೇಕಾದ ರಾಜಸ್ವ- ರೂ 4325 ಕೋಟಿ.
-
ಜುಲೈ 2024ರ ಅಂತ್ಯಕ್ಕೆ ಸಂಗ್ರಹಿಸಿರುವ ರಾಜಸ್ವ- 3534
-
ಶೇಕಡಾವಾರು-82%
ಸಾರಿಗೆ ಇಲಾಖೆಗೆ ಹೊಸದಾಗಿ 85 ಮೋಟಾರು ವಾಹನ ನಿರೀಕ್ಷಕರು ನೇಮಕಗೊಂಡಿದ್ದು, ಇವರನ್ನು ಬಳಸಿಕೊಂಡು ಪ್ರವರ್ತನ ಚಟುವಟಿಕೆಗಳನ್ನು ಹೆಚ್ಚಿಸುವುದು, ಇಲಾಖೆಗೆ ಪ್ರವರ್ತನ ಕಾರ್ಯಗಳಿಗೆ ರಸ್ತೆ ಸುರಕ್ಷತಾ ನಿಧಿಯಿಂದ ಹೊಸ ವಾಹನಗಳನ್ನು ಖರೀದಿಸಲಾಗುತ್ತಿದ್ದು, ಅವುಗಳನ್ನು ಉಪಯೋಗಿಸಿಕೊಂಡು ರಾಜಸ್ವ ಸಂಗ್ರಹಣೆಯ ಗುರಿಯನ್ನು ತಲುಪುವಂತೆ ಸಚಿವರು ಅಧಿಕಾರಿಗಳಿಗೆ ಸಲಹೆ ಮಾಡಿದರು.
ಬಾಕಿ ಇರುವ ತೆರಿಗೆ ಮೊತ್ತವನ್ನು ವಸೂಲಿಸಲು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಆಸಕ್ತಿವಹಿಸಿ ತೆರಿಗೆ ಬಾಕಿದಾರರ ವಿರುದ್ಧ ನ್ಯಾಯಾಲಯದಲ್ಲಿ ಆರೋಪಪಟ್ಟಿ (Charge Sheet) ಸಲ್ಲಿಸಲು ಅಗತ್ಯ ಕ್ರಮವಹಿಸಬೇಕು, ಬಾಕಿ ಇರುವ 6,77,348 ಡಿ.ಎಸ್.ಎ. ಕೇಸ್‌ಗಳನ್ನು ವಿಲೇಗೊಳಿಸಲು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಅಗತ್ಯ ಕ್ರಮವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
Automated Driving Test Tracks ಗಳ ನಿರ್ಮಾಣ:
ಎಲ್ಲಾ ಕಚೇರಿಯ ವ್ಯಾಪ್ತಿಗಳಲ್ಲಿ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥಗಳನ್ನು ನಿರ್ಮಿಸಲು ಕ್ರಮವಹಿಸಲಾಗುತ್ತಿದೆ. ರೂ.80.00 ಕೋಟಿಗಳ ವೆಚ್ಚದಲ್ಲಿ ದೇವನಹಳ್ಳಿ, ಕೋಲಾರ, ಹೊಸಪೇಟೆ, ಗದಗ, ಬಳ್ಳಾರಿ, ವಿಜಯಪುರ, ಬೀದರ್, ಯಾದಗಿರಿ, ದಾವಣಗೆರೆಗಳಲ್ಲಿ ಡ್ರೈವಿಂಗ್ ಟ್ರ್ಯಾಕ್‌ಗಳನ್ನು ನಿರ್ಮಿಸಲಾಗುತ್ತಿದೆ. ರೂ.72.95 ಕೋಟಿಗಳ ವೆಚ್ಚದಲ್ಲಿ ತುಮಕೂರು, ಯಲಹಂಕ, ಶಿರಸಿ, ಸಕಲೇಶಪುರ, ಕೆ.ಜಿ.ಎಫ್., ಚಿಂತಾಮಣಿ, ಸಾಗರ, ಗೋಕಾಕ್, ರಾಣೆಬೆನ್ನೂರು, ದಾಂಡೇಲಿ, ಭಾಲ್ಕಿ ಮತ್ತು ಬೈಲಹೊಂಗಲಗಳಲ್ಲಿ ಡ್ರೈವಿಂಗ್ ಟ್ರ್ಯಾಕ್ ನಿರ್ಮಿಸುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದವರು ತಿಳಿಸಿದರು. 2024-25ನೇ ಸಾಲಿನಲ್ಲಿ 06 ಸ್ಥಳಗಳಲ್ಲಿ ರೂ.36.00 ಕೋಟಿಗಳ ವೆಚ್ಚದಲ್ಲಿ ಡ್ರೈವಿಂಗ್ ಟ್ರ್ಯಾಕ್ ನಿರ್ಮಿಸಲು ಕ್ರಮವಹಿಸಲಾಗುತ್ತಿದೆ ಎಂದರು.
Automated Testing Stations ಸ್ಥಾಪನೆ:
ಅರ್ಹತಾ ಪತ್ರ ನವೀಕರಣಕ್ಕಾಗಿ (Fitness Renewal) ಬರುವ ವಾಹನಗಳನ್ನು ಕಡ್ಡಾಯವಾಗಿ ಅಕ್ಟೋಬರ್ 2024ರಿಂದ ATSಗಳ ಮೂಲಕ ತಪಾಸಣೆಗೊಳಪಡಿಸಬೇಕಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಜಮೀನು ಲಭ್ಯವಿರುವ 13 ಸ್ಥಳಗಳಲ್ಲಿ (ದೇವನಹಳ್ಳಿ, ತುಮಕೂರು, ಕೋಲಾರ, ಶಿವಮೊಗ್ಗ, ದಾವಣಗೆರೆ, ಬೆಳಗಾವಿ, ಗದಗ, ರಾಣೆಬೆನ್ನೂರು, ಬಾಗಲಕೋಟೆ, ವಿಜಯಪುರ, ಬಳ್ಳಾರಿ, ಬೀದರ್, ಮತ್ತು ಯಾದಗಿರಿ) DBFOT ಮಾದರಿಯಲ್ಲಿ ಸ್ವಯಂಚಾಲಿತ ವಾಹನ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದವರು ವಿವರಿಸಿದರು.
19 ಸ್ಥಳಗಳಲ್ಲಿ (ಬೆಂಗಳೂರು ಪೂರ್ವ, ಪಶ್ಚಿಮ, ದಕ್ಷಿಣ ಮತ್ತು ಕೇಂದ್ರ ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಚಾಮರಾಜನಗರ, ಹಾಸನ, ಮಡಿಕೇರೆ, ದಕ್ಷಿಣ ಕನ್ನಡ, ಉಡುಪಿ, ಚಿತ್ರದುರ್ಗ, ಚಿಕ್ಕಮಗಳೂರು, ಉತ್ತರಕನ್ನಡ, ಕಲಬುರಗಿ, ರಾಯಚೂರು, ಕೊಪ್ಪಳ ಮತ್ತು ಹೊಸಪೇಟೆ) BOO ಮಾದರಿಯಲ್ಲಿ ಸ್ವಯಂಚಾಲಿತ ವಾಹನ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದೂ ಅವರು ವಿವರಿಸಿದರು.
Vehicle Location Tracking System ಶೀಘ್ರ ಜಾರಿ:
ಸೆಪ್ಟಂಬರ್ 10ರ ನಂತರ ಎಲ್ಲಾ ಖಾಸಗಿ ಸೇವಾ (PSV) ವಾಹನಗಳಿಗೆ VLTD ಗಳ ಅಳವಡಿಕೆಯನ್ನು ಕಡ್ಡಾಯಗೊಳಿಸತಕ್ಕದ್ದು, ಹಾಗೂ ಈ ನಿಟ್ಟಿನಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಅಗತ್ಯ ಕ್ರಮವಹಿಸುವುದು. ಇ-ಆಡಳಿತ ವಿಭಾಗದಲ್ಲಿನ ಬಾಕಿಯಿರುವ ಎಲ್ಲಾ ಪ್ರಕರಣಗಳನ್ನು ಪರಿಶೀಲಿಸಿ, ಶೀಘ್ರವಾಗಿ ವಿಲೇಗೊಳಿಸಲು ಕ್ರಮವಹಿಸಲು ಸಚಿವರು ಸೂಚಿಸಿದರು.