ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದ್ದ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.
ಸಿಬಿಐ ಸಲ್ಲಿಸಿದ್ದ ಅರ್ಜಿ ಕುರಿತಂತೆ ಹೈಕೋರ್ಟ್ ಇಂದು ವಿಚಾರಣೆ ನಡೆಸಿತು.
ರಾಜ್ಯ ಸರ್ಕಾರ- ಸಿಬಿಐ ನಡುವಿನ ವಿವಾದವನ್ನು ಸುಪ್ರೀಂ ಕೋರ್ಟಿನಲ್ಲಿ ಇತ್ಯರ್ಥ ಪಡಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್, ಸಿಬಿಐ ಅರ್ಜಿಯನ್ನು ವಿಲೇವಾರಿ ಮಾಡಿದೆ. ಸುಪ್ರೀಂ ಕೋರ್ಟ್ನಲ್ಲಿ ಮನವಿ ಸಲ್ಲಿಸುವಂತೆ ಕೋರ್ಟ್ ಸಲಹೆ ಮುಂದಿಟ್ಟಿದೆ.