ಬೆಳಗಾವಿ: ರಾಜಕೀಯ ಬೆಳವಣಿಗೆಗಳ ನಡುವೆಯೇ ಬಿಜೆಪಿ ನಾಯಕರೊಬ್ಬರ ಅಪಹರಣವಾಗಿದೆ. ಕಿತ್ತೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯರೊಬ್ಬರನ್ನು ಅಪಹರಣ ಮಾಡಲಾಗಿದೆವೆಂಬ ಆರೋಪ ಕೇಳಿಬಂದಿದೆ.
ಕಿತ್ತೂರು ಪಟ್ಟಣ ಪಂಚಾಯತಿ ಚುನಾವಣೆ ಸೆಪ್ಟಂಬರ್ 3ಕ್ಕೆ ನಿಗದಿಯಾಗಿದ್ದು, ಬಿಜೆಪಿ 9, ಕಾಂಗ್ರೆಸ್ ಹಾಗೂ ಪಕ್ಷೇತರ ಸೇರಿ 9 ಸದಸ್ಯರ ಸಂಖ್ಯಾಬಲ ಇದೆ. ಹಾಗಾಗಿ ಈ ಚುನಾವಣೆ ಕಾಂಗ್ರೆಸ್ ಮತ್ತು ಬಿಜೆಪಿ ಪಾಲಿಗೆ ಪ್ರತಿಷ್ಠೆಯ ಕಣವಾಗಿದೆ. ಇದೇ ಸಂದರ್ಭದಲ್ಲಿ ಬಿಜೆಪಿ ಸದಸ್ಯ ನಾಗರಾಜ್ ಅಸುಂಡಿ ಅವರನ್ನು ದುಷ್ಕರ್ಮಿಗಳು ಗುರುವಾರ ರಾತ್ರಿ ಅಪಹರಣ ಮಾಡಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.
ಇನ್ನೊಂದೆಡೆ, ಪಟ್ಟಣದ ಚೌಕಿಮಠದ ಬಳಿ ನಿಂತಿದ್ದ ನಾಗರಾಜನನ್ನು ಕೆಲವರು ಬಲವಂತವಾಗಿ ಕರೆದೊಯ್ದಿದ್ದಾರೆ ಎಂದು ಅವರ ತಂದೆ ಬಸವರಾಜ್ ಅವರು ಕಿತ್ತೂರು ಠಾಣೆಗೆ ದೂರು ನೀಡಿದ್ದಾರೆ.