ಬೆಂಗಳೂರು: ಮುಡಾ ಹಗರಣ ವಿರುದ್ಧ ಬೆಂಗಳೂರು-ಮೈಸೂರು ಪಾದಯಾತ್ರೆ ಕೈಗೊಂಡಿದ್ದ ಪ್ರತಿಪಕ್ಷ ಬಿಜೆಪಿ ಇದೀಗ ವಾಲ್ಮೀಕಿ ನಿಗಮ ಅವ್ಯವಹಾರ ಖಂಡಿಸಿ ಮತ್ತೊಂದು ರೀತಿ ಪಾದಯಾತ್ರೆಗೆ ತಯಾರಿ ನಡೆಸಿದೆ. ವಾಲ್ಮೀಕಿ ನಿಗಮ ಅವ್ಯವಹಾರ ಖಂಡಿಸಿ ಶೀಘ್ರದಲ್ಲೇ ಬಿಜೆಪಿ ಪಾದಯಾತ್ರೆ ನಡೆಸಲಿದೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದ್ದಾರೆ.
ಹಗರಣದಲ್ಲಿ ಭಾಗಿಯಾಗಿರುವ ಕಾಂಗ್ರೆಸ್ ನಾಯಕರಿಗೆ ಕ್ಲೀನ್ ಚಿಟ್ ನೀಡಲು ಎಸ್‌ಐಟಿ ರಚಿಸಲಾಗಿದೆ. ಹಾಗಾಗಿ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಬಿಜೆಪಿಯು ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದೆ. ವಾಲ್ಮೀಕಿ ಹಗರಣದಲ್ಲಿ ಎರಡನೇ ಹಂತದ ಹೋರಾಟ ಶುರುವಾಗಲಿದೆ ಎಂದು ಛಲವಾದಿ ನಾರಾಯಣಸ್ವಾಮಿ ತಿಳಿಸಿದ್ದಾರೆ.
ಎಸ್‌ಟಿ ಅಭಿವೃದ್ಧಿ ನಿಗಮದ ಹಗರಣವನ್ನು ಎತ್ತಿ ಹಿಡಿದು ಪಾದಯಾತ್ರೆ ಕೈಗೊಳ್ಳುವ ರಾಜ್ಯ ಬಿಜೆಪಿ ನಾಯಕರ ಮನವಿಗೆ ಹೈಕಮಾಂಡ್ ಒಪ್ಪಿಗೆ ಸೂಚಿಸಿದೆ. ಹಾಗಾಗಲಿ ಪಾದಯಾತ್ರೆಗೆ ರಾಜ್ಯ ಬಿಜೆಪಿ ತಯಾರಿ ನಡೆಸಿದೆ. ಶೀಘ್ರವೇ ಪಾದಯಾತ್ರೆಯ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಛಲವಾದಿ ನಾರಾಯಣಸ್ವಾಮಿ ತಿಳಿಸಿದ್ದಾರೆ.