ನವದೆಹಲಿ: ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಎಂ.ಎಸ್.ಅತಿಶಿ ಆಯ್ಕೆಯಾಗಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರ ಉತ್ತರಾಧಿಕಾರಿಯಾಗಿ ಅತಿಶಿ ಅವರನ್ನು ಆಮ್ ಆದ್ಮಿ ಪಕ್ಷ ಆಯ್ಕೆ ಮಾಡಿದೆ.
ಎಎಪಿ ಪಕ್ಷದ ಶಾಸಕರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಎಎಪಿ ಶಾಸಕರ ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಸಂಚಾಲಕರು ಅತಿಶಿ ಅವರ ಹೆಸರನ್ನು ಪ್ರಸ್ತಾಪಿಸಿದಾಗ, ಎಲ್ಲಾ ಎಎಪಿ ಶಾಸಕರು ಸರ್ವಾನುಮತದಿಂದ ಒಪ್ಪಿಕೊಂಡರು. ಆ ಮೂಲಕ ಆಪ್ ಶಾಸಕಾಂಗ ಪಕ್ಷದ ನೂತನ ನಾಯಕರನ್ನಾಗಿ
ಎಂ.ಎಸ್.ಅತಿಶಿ ಅವರನ್ನು ಆಯ್ಕೆ ಮಾಡಲಾಯಿತು ಎಂದು ಪಕ್ಷದ ಮೂಲಗಳು ತಿಳಿಸಿವೆ.