ಹೊಸಪೇಟೆ (ವಿಜಯನಗರ): ತುಂಗಭದ್ರಾ ಆಣೆಕಟ್ಟಿಗೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಿದರು. ಜೊತೆಯಲ್ಲಿ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಾದ ಡಾ.ಶರಣಪ್ರಕಾಶ ಪಾಟೀಲರು ಭಾಗಿಯಾಗಿದ್ದರು.
ನಂತರ ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಸರಕಾರಿ ಪ್ರೌಢಶಾಲಾ ಮೈದಾನದಲ್ಲಿ ನಡೆದ ವೇದಿಕೆ ಸಮಾರಂಭದಲ್ಲಿ ತುಂಗಭದ್ರಾ ಕ್ಲಸ್ಟರ್-19 ಗೇಟ್ ದುರಸ್ತಿ ಕಾರ್ಯದಲ್ಲಿ ಭಾಗಿಯಾದ ಅಧಿಕಾರಿಗಳಿಗೆ, ತಂತ್ರಜ್ಞರಿಗೆ ಹಾಗು ಕಾರ್ಮಿಕರಿಗೆ ಅಭಿನಂದನೆ ಸಲ್ಲಿಸಲಾಯಿತು.
ಸಮಾರಂಭದಲ್ಲಿ ಜಲ ಸಂಪನ್ಮೂಲ ಸಚಿವರಾದ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹಮದ್, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿರಾಜ್ ತಂಗಡಗಿ, ಸಚಿವರುಗಳಾದ ಬೋಸ್ ರಾಜ್, ಕೊಪ್ಪಳ ಸಂಸದರಾದ ರಾಜಶೇಖರ್ ಹಿಟ್ನಾಳ್, ಬಳ್ಳಾರಿ ಸಂಸದರಾದ ಈ.ತುಕಾರಾಮ್ ಹಾಗೂ ಎರಡೂ ಜಿಲ್ಲೆಗಳ ಶಾಸಕರುಗಳು, ಜಲ ಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
























































