ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪಾಕಿಸ್ತಾನಿ ಪ್ರಜೆಗಳು ಅಕ್ರಮವಾಗಿ ನೆಲೆಸಿರುವ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇವೆ. ಇದೀಗ ಮತ್ತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಪೀಣ್ಯದಲ್ಲಿ ವಾಸವಿದ್ದ ಮೂವರು ಪಾಕಿಸ್ತಾನಿ ಪ್ರಜೆಗಳನ್ನು ಪೊಲೀಸರು ಗುರುವಾರ ವಶಕ್ಕೆ ತೆಗೆದುಕೊಂಡಿದ್ದಾರೆ.
ಕೆಲವು ದಿನಗಳ ಹಿಂದೆ ಜಿಗಣಿ ಬಳಿ ನಾಲ್ವರನ್ನು ಪೊಲೀಸರು ಬಂಧಿಸಿದ್ದರು. ಗುರುವಾರ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಪೀಣ್ಯದಲ್ಲಿ ನಕಲಿ ಗುರುತಿನ ಚೀಟಿ ಹೊಂದಿ, ಬೆಂಗಳೂರಿನಲ್ಲಿ ನೆಲೆಸಿದ್ದ ಪತಿ, ಪತ್ನಿ ಹಾಗೂ ಮಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.






































































