ನವದೆಹಲಿ: ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರವಹಿಸಿಕೊಂಡಿದ್ದಾರೆ.
ಸೋಮವಾರ ಅವರು ಪ್ರಮಾಣವಚನ ಸ್ವೀಕರಿಸಿದರು. ಈವರೆಗೂ ಸಿಜೆಐ ಡಿ.ವೈ ಚಂದ್ರಚೂಡ್ ಅವರಿಂದ ತೆರವಾದ ಸ್ಥಾನವನ್ನು ನ್ಯಾಯಮೂರ್ತಿ ಸಂಜೀವ್ ಖನ್ನಾ ಅಲಂಕರಿಸಿದ್ದಾರೆ.
1980ರಲ್ಲಿ ದೆಹಲಿ ವಿವಿಯಿಂದ ಕಾನೂನು ಪದವಿಪಡೆದಿರುವ ಇವರು, ಈವರೆಗೂ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಿಟ್ಟಿದ್ದರು. ಚುನಾವಣಾ ಬಾಂಡ್ ರದ್ದತಿ, ಕಣಿವೆ ರಾಜ್ಯ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370 ವಿಧಿ ರದ್ದತಿ ಸಹಿತ ಹಲವು ಪ್ರಕರಣಗಲ್ಲಿ ನ್ಯಾಯಮುರ್ತಿ ಸಂಜೀವ್ ಖನ್ನಾ ಅವರು ನೀಡಿರುವ ತೀರ್ಪು ಗಮನಾರ್ಹ. ಸುಪ್ರೀಂಕೋರ್ಟ್‌ನ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿರುವ ಇವರು ಮೇ. 13, 2025 ರವರೆಗೆ ಅಧಿಕಾರದಲ್ಲಿ ಇರಲಿದ್ದಾರೆ.