ಮಂಗಳೂರು: ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಬೀಗಿದೆ. ಇದೀಗ ಕರಾವಳಿ ಜಿಲ್ಲೆಗಳ ಗ್ರಾಮ ಪಂಚಾಯತ್ ಚುನಾವಣೆಗಳಲ್ಲೂ ಕಾಂಗ್ರೆಸ್ ಬೆಂಬಲಿಗರು ಹೆಚ್ಚಿನ ಕಡೆ ಗೆದ್ದಿದ್ದಾರೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್.ಪೂಜಾರಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯತ್ಗಳ 24 ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 19 ಅಭ್ಯರ್ಥಿಗಳು ಹಾಗೂ ಬಂಟ್ವಾಳ ಪುರಸಭೆಯ ಒಂದು ಸ್ಥಾನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ, ಈ ಫಲಿತಾಂಶ ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯವನ್ನು ಜನತೆ ಮೆಚ್ಚಿಕೊಂಡಿದ್ದಾರೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಪದ್ಮರಾಜ್ ಆರ್.ಪೂಜಾರಿ ಹೇಳಿದ್ದಾರೆ.
ವಿಪಕ್ಷಗಳ ವಕ್ಫ್ ಆರೋಪ, ರೇಷನ್ ಕಾರ್ಡ್ ಗೊಂದಲ ಕುರಿತ ಅಪಪ್ರಚಾರಗಳಿಗೆ ಮತದಾರರು ಯಾವುದೇ ಮನ್ನಣೆ ನೀಡಿಲ್ಲ ಎಂದಿರುವ ಪದ್ಮರಾಜ್, ಈ ಫಲಿತಾಂಶವು ಮುಂಬರುವ ಚುನಾವಣೆಗಳಿಗೆ ದಿಕ್ಸೂಚಿಯಾಗಿದೆ ಎಂದು ವಿಶ್ಲೇಷಿಸಿದ್ದಾರೆ.