ಹಾಸನ: ಶಿಲ್ಪಿ ದೇಗುಲಗಳ ನಾಡು ಹಾಸನದಲ್ಲಿ ಕಾಂಗ್ರೆಸ್ ಪಕ್ಷದ ಸಮಾವೇಶಕ್ಕೆ ತೆರಳುತ್ತಿದ್ದ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ಅವರ ಕಾರು ಅಪಘಾತಕ್ಕೀಡಾಗಿದೆ.
ಶಾಂತಿಗ್ರಾಮ ರಸ್ತೆಯ ಮೂಲಕ ಹಾಸನಕ್ಕೆ ತೆರಳುತ್ತಿದ್ದ ಮಾರ್ಗ ಮಧ್ಯೆ ಟೋಲ್ ಕೇಂದ್ರ ಸಮೀಪ ಕೆ.ಹೆಚ್. ಮುನಿಯಪ್ಪ ಪ್ರಯಾಣಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು ಡಿಕ್ಕಿಯಾಗಿದೆ.ಅಪಘಾತದಲ್ಲಿ ವಾಹನಕ್ಕೆ ಹಾನಿಯಾಗಿದೆ. ಆದರೆ ಯಾವುದೇ ಪ್ರಾಣಾಪಾಯದಿಂದ ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ.