ವಿಜಯಪುರ: ವಿಜಯಪುರ ಜಿಲ್ಲೆ ತಾಳಿಕೋಟೆ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ. ತಾಳಿಕೋಟೆ ತಾಲೂಕಿನ ಬಿಳೆಬಾವಿ ಕ್ರಾಸ್ ಬಳಿ ಕಾರಿಗೆ ಕಬ್ಬು ಕಟಾವು ಮಷಿನ್ ಡಿಕ್ಕಿಯಾಗಿ ಕಾರಿನಲ್ಲಿದ್ದವರು ಮೃತಪಟ್ಟಿದ್ದಾರೆ.
ಯಾದಗಿರಿಯಿಂದ ವಿಜಯಪುರಕ್ಕೆ ಪ್ರಯಾಣಿಕರನ್ನು ಕರೆತರುತ್ತಿದ್ದ ಕಾರು ಕಬ್ಬು ಕಟಾವು ಮಷಿನ್’ಗೆ ಅಪ್ಪಳಿಸಿದೆ ಎನ್ನಲಾಗಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ತಾಳಿಕೋಟೆ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.