ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ 2500 ನಿರ್ವಾಹಕ ಹುದ್ದೆಯ ನೇಮಕಾತಿ ಸಂಬಂಧ 371-ಜೆ (ಕಲ್ಯಾಣ ಕರ್ನಾಟಕ) ಮೀಸಲಾತಿಯಡಿ 212 ಅಭ್ಯರ್ಥಿಗಳನ್ನು ಆಯ್ಕೆಗೊಳಿಸಿದ್ದು, :07.12.2024 ರಂದು ಅಭ್ಯರ್ಥಿಗಳಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಯವರು ನೇಮಕಾತಿ ಆದೇಶ ಪತ್ರಗಳನ್ನು ವಿತರಿಸಿದರು. ಈ ಮೂಲಕ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದರು.
ಸರ್ಕಾರವು 9000 ಹೊಸ ಹುದ್ದೆಗಳ ನೇಮಕಾತಿಗೆ ಅನುಮತಿ ನೀಡಿದ್ದು, ಅದರಂತೆ ಈಗಾಗಲೇ 2500 ನಿರ್ವಾಹಕ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಬಿಎಂಟಿಸಿ ಯಲ್ಲಿ ಕೊನೆಗೊಂಡಿದ್ದು, ನೇಮಕಾತಿ ಆದೇಶ ನೀಡುವುದು ಬಾಕಿಯಿದೆ. 2000 ಚಾಲಕ-ಕಂ- ನಿರ್ವಾಹಕ ಹುದ್ದೆಗಳ ನೇಮಕಾತಿ KSRTCಯಲ್ಲಿ, 1000, ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ನಡೆಯುತ್ತಿದೆ. ಒಟ್ಟು 5400 ಹುದ್ದೆಗಳ ನೇಮಕಾತಿ ವಿವಿಧ ಹಂತದಲ್ಲಿದೆ. 1000 ಅನುಕಂಪ ಆಧಾರದ ನೌಕರಿ ನೀಡಲಾಗಿದೆ. ಒಟ್ಟು ಹುದ್ದೆಗಳ ನೇಮಕಾತಿ ,10000 ಆಗಲಿದೆ.
ನಮ್ಮ ಸರ್ಕಾರದ ಅವಧಿಯಲ್ಲಿ ಒಟ್ಟು 4400 ಹೊಸ ಬಸ್ಸುಗಳ ಸೇರ್ಪಡೆಯಾಗಿದ್ದು, ಉಳಿದ ಬಸ್ಸುಗಳು ಶೀಘ್ರದಲ್ಲಿಯೇ ಸೇರ್ಪಡೆಯಾಗಲಿದೆ.
ಶಕ್ತಿ ಯೋಜನೆಯಡಿಯಲ್ಲಿ ಇಲ್ಲಿಯವರೆಗೆ ಒಟ್ಟು 344. 06 ಕೋಟಿ ಮಹಿಳಾ ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ.
ಈ ಸಂದರ್ಭದಲ್ಲಿ ವ್ಯವಸ್ಥಾಪಕ ನಿರ್ದೇಶಕರಾದ ರಾಮಚಂದ್ರನ್ .,ನಿರ್ದೇಶಕರು (ಭದ್ರತಾ & ಜಾಗೃತ) ಅಬ್ದುಲ್ ಅಹದ್, ನಿರ್ದೇಶಕರಾದ (ಮಾಹಿತಿ ತಂತ್ರಜ್ಞಾನ) ಶಿಲ್ಪಾ.ಎಂ.,, ಮುಖ್ಯ ಸಂಚಾರ ವ್ಯವಸ್ಥಾಪಕ ಪ್ರಭಾಕರ್ ರೆಡ್ಡಿ ಬಿಎಂಟಿಸಿ ಹಾಗೂ ಸಂಸ್ಥೆಯ ಅಧಿಕಾರಿಗಳು ಉಪಸ್ಥಿತರಿದ್ದರು.