ರಾಯಚೂರು : ರಾಯಚೂರಿನ ಸಿಂಧನೂರು ಪಟ್ಟಣದಲ್ಲಿ ಸೋಮವಾರ ರಾತ್ರಿ ಲಾರಿ ಪಲ್ಟಿಯಾಗಿ ಮೂವರು ಸಾವನ್ನಪ್ಪಿದ್ದಾರೆ. ಲಾರಿ ಪಲ್ಟಿಯಾಗಿ ಅದರಲ್ಲಿದ್ದ ಚೀಲಗಳು ರಸ್ತೆ ಬದಿ ನಿಂತಿದ್ದವರ ಮೇಲೆ ಬಿದ್ದಿದೆ.
ಸಿಂಧನೂರಿನ ಪಿಡಬ್ಲ್ಯೂಡಿ ಸಮೀಪ ಡಾಲರ್ಸ್ ಕಾಲೋನಿ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಕಿರಿಯ ಎಂಜಿನಿಯರ್ ಗಳಾದ ಮಲ್ಲಿಕಾರ್ಜುನ, ಶಿವರಾಜು, ಮೆಹಬೂಬ ಎಂಬವರು ಸಾವನ್ನಪ್ಪಿದ್ದಾರೆ. ಪಿಡಬ್ಲ್ಯೂಡಿ ಕ್ಯಾಂಪ್ ನ ಡಾಲರ್ಸ್ ಕಾಲೋನಿಗೆ ತೆರಳುವ ಮಧ್ಯೆ ರಸ್ತೆ ಬದಿ ನಿಂತಿದ್ದ ಇವರನ್ನು ಲಾರಿ ಬಲಿಪಡೆದಿದೆ.
ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.