ಚಿಕ್ಕಮಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಆರೋಪಡಿ ಬೆಳಗಾವಿ ಪೊಲೀಸರು ಬಿಜೆಪಿ ಶಾಸಕ ಸಿ.ಟಿ.ರವಿ ಅವರನ್ನುಬಂಧಿಸಿರುವ ಕ್ರಮದ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಸಿ.ಟಿ.ರವಿ ಬಂಧನ ಖಂಡಿಸಿ ಬಿಜೆಪಿಯು ಶುಕ್ರವಾರ (ಡಿ.20) ಚಿಕ್ಕಮಗಳೂರು ನಗರ ಬಂದ್‌ಗೆ ಕರೆ ನೀಡಿದೆ.
ಸಿ.ಟಿ.ರವಿ ಬಂಧನದ ಸುದ್ದಿ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ಜಿಲ್ಲಾ ಬಿಜೆಪಿ ನಾಯಕರು ಸಭೆ ನಡೆಸಿದರು. ನೂರಾರು ಬಿಜೆಪಿ ಕಾರ್ಯಕರ್ತರ ಜೊತೆ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ ಅವರು, ಸಿ.ಟಿ.ರವಿ ಬಂಧನ ಖಂಡಿಸಿ ಶುಕ್ರವಾರ ಚಿಕ್ಕಮಗಳೂರು ನಗರ ಬಂದ್‌ಗೆ ಕರೆ ನೀಡಿದರು.