ಹುಬ್ಬಳ್ಳಿ,: ವಿಧಾನ ಪರಿಷತ್ ಸಭಾಂಗಣದಲ್ಲಿ ಗುರುವಾರ ಶಾಸಕ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಆಕ್ಷೇಪಾರ್ಹ ಪದ ಬಳಸಿ ಮಾತನಾಡಿದ್ದ ಬಗ್ಗೆ ಯಾವುದೇ ರೆಕಾರ್ಡ್ ಇಲ್ಲ ಎಂದು ಸಭಾಪತಿ ಬಸವರಾಜ ಹೊರಟ್ಟಿ ಸ್ಪಷ್ಟಪಡಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತ ಗುರುವಾರದ ಘಟನೆ ಕುರಿತಂತೆ ಸ್ಪಷ್ಟನೆ ನೀಡಿದರು. ಆಡಿಯೋ ರೆಕಾರ್ಡ್ ಆಗಿಲ್ಲ ಸಾಕ್ಷಿಗಳು ಮಾತ್ರ ಇವೆ. ರೆಕಾರ್ಡ್ ಹುಡುಕಿದ್ದೇನೆ ನಮಗೆ ಆಡಿಯೋ ಸಿಕ್ಕಿಲ್ಲ.ಅಶ್ಲೀಲ ಪದ ಬಳಸಿದ್ದಾರೆ ಎಂದು ನಾಲ್ವರು ಸಾಕ್ಷಿ ಹೇಳಿದ್ದಾರೆ ಎಂದರು. ಇದೇ ವೇಳೆ, ಸಿ.ಟಿ.ರವಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಅವರಿಂದ ಗೂರುಗಳನ್ನು ಪಡೆದಿದ್ದು, ಇಬ್ಬರ ದೂರುಗಳನ್ನೂ ಪರಿಶೀಲಿಸಲಾಗುವುದು ಎಂದು ಸಭಾಪತಿ ತಿಳಿಸಿದರು.