ಬೆಂಗಳೂರು: ಬಹು ನಿರೀಕ್ಷಿತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ವರದಿಯನ್ನು ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುತ್ತದೆ ಎಂದು ತಿಳಿಸಿರುವ ಎಂದು ಗೃಹ ಸಚಿವ ಪರಮೇಶ್ವರ್, ಅನಂತರ ವಿಷಯಗಳನ್ನು ಸಾರ್ವಜನಿಕಗೊಳಿಸುವ ಸಾಧ್ಯತೆಯಿದೆ ಹೇಳಿದ್ದಾರೆ.
ಸುದ್ದಿಗಾರರಿಗೆ ಈ ಕುರಿತು ಮಾಹಿತಿ ನೀಡಿರುವ ಪರಮೇಶ್ವರ್, ವರದಿಯನ್ನು ಆಧರಿಸಿದ ಯಾವುದೇ ನಿರ್ಧಾರವು ಸರ್ಕಾರದ ವಿಶೇಷಾಧಿಕಾರವಾಗಿದ್ದು, ಪರಾಮರ್ಶಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ ಜಯಪ್ರಕಾಶ್ ಹೆಗ್ಡೆ ಅವರ ನೇತೃತ್ವದಲ್ಲಿ ಕಳೆದ ವರ್ಷ ಫೆಬ್ರವರಿ 29 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿಯನ್ನು ಸಲ್ಲಿಸಿತ್ತು. ಈ ವರ್ದಿ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆದಿರುವಾಗಲೇ ಸಿದ್ದರಾಮಯ್ಯ ಸರ್ಕಾರ ತಮ್ಮದೇ ಆದ ಕ್ರಮಕ್ಕೆ ಮುಂದಾಗಿದೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಕುತೂಹಲ ಕೆರಳಿಸಿದೆ.























































