ಮಂಗಳೂರು: ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಬೀದರ್ ಎಟಿಎಂ ದರೋಡೆ ಪ್ರಕರಣ ಬೆನ್ನಲ್ಲೇ ಮಂಗಳೂರಿನಲ್ಲೂ ಅಂತಹುದೇ ಮತ್ತೊಂದು ದರೋಡೆ ಪ್ರಕರಣ ನಡೆದಿದೆ. ದುಷ್ಕರ್ಮಿಗಳು ಬರೊಬ್ಬರಿ 12 ಕೋಟಿ ರೂ ಮೌಲ್ಯದ ನಗದ ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಮಂಗಳೂರು ಹೊರವಲಯದ ಉಳ್ಳಾಲದ ಕೆ.ಸಿ.ರೋಡಿನಲ್ಲಿ ಶುಕ್ರವಾರ ಮಧ್ಯಾಹ್ನ ಬ್ಯಾಂಕಿಗೆ ನುಗ್ಗಿದ ಆರು ಜನರಿದ್ದ ದರೋಡೆಕೋರರ ತಂಡ ಸುಮಾರು 12 ಕೋಟಿ ರೂ ಮೌಲ್ಯದ ನಗ-ನಗದು ದೋಚಿ ಪರಾರಿಯಾಗಿದ್ದಾರೆ. ಕೋಟೆಕಾರು ಬ್ಯಾಂಕ್ ಕೆ.ಸಿರೋಡು ಶಾಖೆಗೆ ನುಗ್ಗಿ, ಪಿಸ್ತೂಲು ಮತ್ತು ಮಾರಕಾಸ್ತ್ರ ತೋರಿಸಿ ನಾಗ-ನಾಣ್ಯ ಲೂಟಿ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳೂರು ಭೇಟಿ ಕೈಗೊಂಡ ಹಿನ್ನೆಲೆಯಲ್ಲಿ ಹೆಚ್ಚಿನ ಪೊಲೀಸರು ಭದ್ರತೆಗೆ ತೆರಳಿದ್ದರು. ಈ ಸಂದರ್ಭದಲ್ಲಿ ಈ ದರೋಡೆ ನಡೆದಿದೆ ಎನ್ನಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಉಳ್ಳಾಲ ಠಾಣೆ ಪೊಲೀಸರುಪರಿಶೀಲನೆ ನಡೆಸಿದ್ದಾರೆ.






















































