ಬೆಂಗಳೂರು: ರಾಜಧಾನಿ ಬೆಂಗಳೂರಿನ ಸಿಸಿಬಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಡ್ರ್ಯಾಗ್ ಮಾಫಿಯಾವನ್ನು ಬೇಧಿಸಿದ್ದಾರೆ. ಮಾದಕದ್ರವ್ಯ ನಿಗ್ರಹದಳ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ಗಳನ್ನು ಸೆರೆಹಿಡಿದಿದ್ದಾರೆ. ಬಂಧಿತರನ್ನು ನೈಜೀರಿಯಾ ಮೂಲದ ಎಸ್ಸೋ ಜರ್ಮನ್, ಜಾನ್ ಚುಕುವಾ ಎಂದು ಗುರುತಿಸಲಾಗಿದೆ.
ಈ ಹಿಂದೆಯೂ ಕೂಡ ಡ್ರಗ್ ಮಾರಾಟ ಆರೋಪದಲ್ಲಿ ಈ ಆರೋಪಿಗಳು ಜೈಲು ಸೇರಿದ್ದರು. ಬಿಡುಗಡೆಯಾದ ನಂತರವೂ ದಂಧೆಯನ್ನು ಮುಂದುವರಿಸಿರುವ ಬಗ್ಗೆ ಮಾಹಿತಿ ಕಲೆಹಾಕಿದ ಸಿಸಿಬಿ ಪೊಲೀಸರು ಈ ಆರೋಪಿಗಳ ಬಗ್ಗೆ ನಿಗಾ ವಹಿಸಿದ್ದರು. ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಸಂದರ್ಭದಲ್ಲೇ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಆರೋಪಿಗಳನ್ನುಸೆರೆಹಿಡಿದಿದ್ದಾರೆ.
ಆರೋಪಿಗಳಿಂದ ಸುಮಾರು 17 ಲಕ್ಷ ರೂಪಾಯಿ ಮೌಲ್ಯದ 108 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.