ಇಸ್ಲಾಮಾಬಾದ್: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ರೈಲು ಅಪಹರಣ ಮಾಡಿರುವ ಉಗ್ರರ ಧಮನ ಕಾರ್ಯಾಚರಣೆ ಮುಂದುವರಿಸಿರುವ ಸೇನೆ ನೂರಕ್ಕೂ ಹೆಚ್ಚು ಪ್ರಯಾಣಿಕರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
After 6 hours of hijacking Jaffar Express train in Balochistan, 20 Pakistani military personnel were eliminated, and 182 hostages remain in custody of BLA.
More power to Balochs 💪#TrainHijack #Balochistan pic.twitter.com/WbKCWs55yM
— Wahida 🇦🇫 (@RealWahidaAFG) March 11, 2025
ಕ್ವೆಟ್ಟಾದಿಂದ ಪೆಶಾವರಕ್ಕೆ ತೆರಳುತ್ತಿದ್ದ ಜಾಫರ್ ಎಕ್ಸ್‌ಪ್ರೆಸ್ ರೈಲಿನ್ನು ವಶಕ್ಕೆ ಪಡೆದು ಅಪಹರಿಸಿದ್ದ ಉಗ್ರರು, ಸುಮಾರು 400 ಪ್ರಯಾಣಿಕರನ್ನು ಒತ್ತೆಯಾಳಾಗಿರಿಸಿದ್ದರು. ಗಡಾಲರ್ ಮತ್ತು ಪೆಹ್ರೊ ಕುನ್ರಿ ಕಣಿವೆ ಪ್ರದೇಶದ ಸಮೀಪದ ಸುರಂಗದಲ್ಲಿ ಬಂದೂಕುಧಾರಿಗಳು ಮಂಗಳವಾರ ಈ ರೈಲನ್ನು ಹಿಡಿತಕ್ಕೆ ತೆಗೆದುಕೊಂಡಿದ್ದರು. ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (ಬಿಎಲ್‌ಎ) ಈ ದಾಳಿಯ ಹೊಣೆ ಹೊತ್ತುಕೊಂಡಿದೆ.
ಈ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ನಡೆಸಿರುವ ಪಾಕಿಸ್ತಾನದ ಭದ್ರತಾ ಪಡೆ 104 ಪ್ರಯಾಣಿಕರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದೆ. ಸುದೀರ್ಘ ಕಾರ್ಯಚನೆಯಲ್ಲಿ ಸುಮಾರು 16 ಉಗ್ರರನ್ನು ಹತ್ಯೆ ಮಾಡಿದೆ ಎಂದು ವರದಿಯಾಗಿದೆ. ರಕ್ಷಿಸಲ್ಪಟ್ಟ ಪ್ರಯಾಣಿಕರನ್ನು ಮತ್ತೊಂದು ರೈಲಿನ ಮೂಲಕ ಸುರಕ್ಷಿತ ಸ್ಥಳಕ್ಕೆ ಕಳುಹಿಸಲಾಗಿದೆ. ಈ ನಡುವೆ, ಸುರಂಗವನ್ನು ಸುತ್ತುವರಿದಿರುವ ಸೇನಾಪಡೆ ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರಿಸಿದೆ.