ಲಖನೌ: ಉತ್ತರ ಪ್ರದೇಶದ ಬಹುತೇಕ ಮಸೀದಿಗಳನ್ನು ಟಾರ್ಪಲಿನ್ ನಿಂದ ಮುಚ್ಚಲಾಗಿದೆ. ಐತಿಹಾಸಿಕ ‘ಲಾಟ್ ಸಾಹೇಬ್’ ಮೆರವಣಿಗೆ ಸಾಗುವ ಮಾರ್ಗದಲ್ಲಿನ ಮಸೀದಿಗಳನ್ನು ಟಾರ್ಪಾಲಿನ್‌ನಿಂದ ಮುಚ್ಚಲು ನಗರ ಪಾಲಿಕೆ ಕ್ರಮ ಕೈಗೊಂಡಿದ್ದು, ಈ ಹಿನ್ನೆಲೆಯಲ್ಲಿ ಬಹುತೇಕ ಮಸೀದಿಗಳನ್ನು ಟಾರ್ಪಲಿನ್ ನಿಂದ ಮುಚ್ಚಲಾಗಿದೆ.
This was never happening before 2014 that mosques in India were being covered before Holi.
BJP has destroyed this country 👇
— Dhruv Rathee (Parody) (@dhruvrahtee) March 12, 2025
ಹೋಳಿ ಹಬ್ಬದ ಆಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕ ಘಟನೆಗಳು ನಡೆಯದಂತೆ ವ್ಯಾಪಕ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಹಾಗಾಗಿ ಶಹಜಹಾನ್‌ಪುರದಲ್ಲಿ ಹೋಳಿ ಹಬ್ಬದ ಅಂಗವಾಗಿ ಹಮ್ಮಿಕೊಳ್ಳಲಾಗುವ ‘ಲಾಟ್ ಸಾಹೇಬ್’ ಮೆರವಣಿಗೆ ಸಾಗುವ ಮಾರ್ಗದಲ್ಲಿನ ಮಸೀದಿಗಳನ್ನು ಟಾರ್ಪಾಲಿನ್‌ನಿಂದ ಮುಚ್ಚಲು ನಗರ ಪಾಲಿಕೆ ಕರಮ್ ಕೈಗೊಂಡಿದೆ. 20 ಮಸೀದಿಗಳಿಗೆ ಟಾರ್ಪಾಲಿನ್ ಹೊದಿಸಲಾಗುವುದು. ಸುರಕ್ಷತೆ ದೃಷ್ಟಿಯಿಂದ ಮಸೀದಿಗಳು ಹಾಗೂ ಟ್ರಾನ್ಫ್‌ಫಾರ್ಮರ್‌ಗಳ ಬಳಿ ತಡೆಗೋಡೆಗಳನ್ನು ನಿರ್ಮಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶಹಜಹಾನ್ ಪುರ ಮಾತ್ರವಲ್ಲ ಸಂಭಾಲ್ ನಲ್ಲೂ ಮಸೀದಿಗಳಿಗೆ ಹೊದಿಕೆಗಳನ್ನು ಹೊದಿಸಲಾಗಿದೆ. ಸಂಭಾಲ್ ಜಾಮಾ ಮಸೀದಿ ಹಾಗೂ ಹೋಳಿ ಮೆರವಣಿಗೆ ಸಾಗುವ ಮಾರ್ಗದಲ್ಲಿನ ಸುಮಾರು 10 ಮಸೀದಿಗಳನ್ನು ಮುಚ್ಚಲಾಗಿದೆ.