ಉಡುಪಿ: ಬೆಲೆ ಏರಿಕೆ ವಿರುದ್ಧ ಬಿಜೆಪಿ ನಡೆಸುತ್ತಿರುವ ಜನಾಕ್ರೋಶ ಯಾತ್ರೆಯು ಬಿಜೆಪಿಯ ಶಕ್ಸ್ಟಿಪ್ರದರ್ಶನಕ್ಕೆ ಸಾಕ್ಷಿಯಾಗುತ್ತಿದೆ. ಉಡುಪಿಯಲ್ಲಿ ಗುರುವಾರ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು.
ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ @BYVijayendra ರವರ ನೇತೃತ್ವದಲ್ಲಿ ಇಂದು ಬೆಳಿಗ್ಗೆ ಉಡುಪಿ ನಗರದಲ್ಲಿ, ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ನಡೆದ ಜನಾಕ್ರೋಶ ಯಾತ್ರೆಯ ವಿಡಿಯೋ… ಇಂದಿನ ಬೃಹತ್ #ಜನಾಕ್ರೋಶಯಾತ್ರೆ ಯಲ್ಲಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ನಮ್ಮೊಂದಿಗೆ ಭಾಗವಹಿಸಿ, ನಮಗೆ ಬೆಂಬಲ ನೀಡಿ, ಭ್ರಷ್ಟ ಕಾಂಗ್ರೆಸ್ ಸರ್ಕಾರದ… pic.twitter.com/zdJhZBp8s1
— Yashpal Anand Suvarna (@YashpalBJP) April 10, 2025
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ‘ ರಾಜ್ಯದ ಕಾಂಗ್ರೆಸ್ ಸರ್ಕಾರವು ಬಡವರ ವಿರೋಧಿ’ ಎಂದರು. ಭ್ರಷ್ಟ ಹಾಗೂ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ನಡೆಸಲಾಲಾಗುತ್ತಿದೆ. ಬೆಲೆ ಏರಿಕೆಯ ಬರೆ ಎಳೆದು ನಿತ್ಯವೂ ಬಡವರನ್ನು ಹಿಂಡುತ್ತಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರ ತೊಲಗಿಸಲು ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಆಕ್ರೋಶ ಹೊರಹಾಕಿದ್ದಾರೆ ಎಂದರು.
ಈ ಸುದ್ದಿಯನ್ನು ಇಂಗ್ಲಿಷ್’ನಲ್ಲಿ ಓದಿ..
Janakrosh Yatra: BJP slams Cong-led K’taka govt for ‘failing’ backward classes
ಓಲೈಕೆ ರಾಜಕಾರಣಕ್ಕೆ ಕಟ್ಟುಬಿದ್ದಿರುವ ರಾಜ್ಯ ಸರ್ಕಾರ ಶೋಷಿತರೂ ಸೇರಿದಂತೆ ಸಮಗ್ರ ಹಿಂದೂ ಸಮುದಾಯಕ್ಕೆ ದ್ರೋಹ ಬಗೆಯುತ್ತಿಡೇ ಎಂದು ವಿಜಯೇಂದ್ರ ಆಕ್ರೋಶ ಹೊರಹಾಕಿದರು.
ವಿಧಾನ ಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಪ್ರಮೋದ್ ಮದ್ವರಾಜ್, ಶಾಸಕರಾದ ಕಾರ್ಕಳ ಸುನಿಲ್ ಕುಮಾರ್, ಕಿಶೋರ್ ಕುಮಾರ್, ಯಶ್‌ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಶೆಟ್ಟಿ ಗಂಟಿಹೊಳಿ, ಸೇರಿದಂತೆ ಪಕ್ಷದ ಪ್ರಮುಖರು ಜನಾಕ್ರೋಶ ಯಾತ್ರೆಯಲ್ಲಿ ಭಾಗವಹಿಸಿದ್ದರು.