ನವದೆಹಲಿ: ಜಮ್ಮುಕಾಶ್ಮೀರದ ಪಹಲ್ಗಾಮ್ ಬಳಿ ಮಂಗಳವಾರ ಉಗ್ರರು ನಡೆಸಿದ ದಾಳಿ ಬೆನ್ನಲ್ಲೇ ಭಾರತ ಸರ್ಕಾರ ಪಾಕಿಸ್ತಾನ ವಿರುದ್ಧ ರಾಜತಾಂತ್ರಿಕ ಯುದ್ಧ ಘೋಷಿಸಿದೆ. ಪಹಲ್ಗಮ್ ದಾಳಿಯಲ್ಲಿ ಪಾಕಿಸ್ತಾನ ಕೈವಾಡ ಇರುವುದು ಗೊತ್ತಾಗುತ್ತಿದ್ದಂತೆಯೇ ಮೋದಿ ಸರ್ಕಾರ ಪ್ರಮುಖ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದೆ.
ಈ ಸಂಬಂಧ ಪ್ರಧಾನಿ ಉಪಸ್ಥಿತಿಯಲ್ಲಿ ಬುಧವಾರ ಭದ್ರತೆ ಕುರಿತ ಸಂಪುಟ ಉಪಸಮಿತಿ ಸಭೆ ನಡೆಯಿತು. ಪಾಕ್ ಜೊತೆಗಿನ ರಾಜತಾಂತ್ರಿಕ ಸಂಬಂಧ ಮೊಟಕುಗೊಳಿಸುವ ತೀರ್ಮಾನ ಕೈಗೊಳ್ಳಲಾಯಿತು.
ಪ್ರಮುಖ ಘೋಷಣೆಗಳು:
-
ಪಾಕ್ ಜೊತೆಗಿನ ಸಿಂಧೂ ನದಿ ನೀರು ಒಪ್ಪಂದ ಅಮಾನತು.
-
ಪಾಕಿಸ್ತಾನಿ ಪ್ರಜೆಗಳಿಗೆ ಭಾರತದ ವೀಸಾ ರದ್ದು
-
ಭಾರತದಲ್ಲಿರುವ ಪಾಕಿಸ್ತಾನಿ ರಾಯಭಾರ ಕಚೇರಿ ಮುಚ್ಚುವುದು.
-
ಭಾರತ ತೊರೆಯಲು ಪಾಕಿಸ್ತಾನಿಯಾರಿಗೆ 48 ಗಂಟೆಗಳ ಗಡುವು.
-
ಅಟ್ಟಾರಿ ಗಡಿ ಚೆಕ್‌ಪೋಸ್ಟ್ ಮುಚ್ಚುವುದು.