ಪಹಲ್ಗಾಮ್’ನ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟಿರುವ ಕನ್ನಡಿಗರ ಮೃತದೇಹಗಳನ್ನು ಬೆಂಗಳೂರಿಗೆ ತರಲಾಗಿದೆ.
ಕನ್ನಡಿಗರಾದ ಮಂಜುನಾಥ್ ರಾವ್ ಹಾಗೂ ಭರತ್ ಭೂಷಣ್ ಅವರ ಪಾರ್ಥಿವ ಶರೀರಗಳನ್ನು ಭಾರತ ಸರ್ಕಾರದ ಪರವಾಗಿ ಕೇಂದ್ರದ ರೈಲ್ವೆ ಮತ್ತು ಜಲಶಕ್ತಿ ಸಚಿವರಾದ ವಿ.ಸೋಮಣ್ಣ ಅವರು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವೀಕರಿಸಿದರು. ಸಂಸದ ತೇಜಸ್ವಿ ಸೂರ್ಯ ಕೂಡಾ ಉಪಸ್ಥಿತರಿದ್ದರು.
ಪಾರ್ಥಿವ ಶರೀರಕ್ಕೆ ಗೌರವ ನಮನ ಸಲ್ಲಿಸಿದ ಸಚಿವರು ದುಃಖ ತಪ್ತ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.