ಬೆಂಗಳೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ರಾಯಚೂರು ವಿಭಾಗದ ಲಿಂಗಸುಗೂರು ಘಟಕದ ಚಾಲಕ ಕಂ ನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಬಸಪ್ಪ ಸಂಖ್ಯೆ 189 ಮತ್ತು
ತಾಯಿ ನಾಗರತ್ನ ರವರ ಪುತ್ರ ಆನಂದಕುಮಾರ aವರು ಕೇಂದ್ರ ಲೋಕಸೇವಾ ಆಯೋಗದ ಭಾರತೀಯ ಅರಣ್ಯ ಸೇವೆ (IFS) ಪರೀಕ್ಷೆಯಲ್ಲಿ 41ನೇ ರ‍್ಯಾಂಕ್ ಗಳಿಸಿದ್ದಾರೆ. ಈ ಮೂಲಕ ಭಾರತದ ಅರಣ್ಯ ಸೇವೆಗೆ ಆಯ್ಕೆಯಾಗಿರುವ ಅವರ ಕುಟುಂಬವಲಯದಲ್ಲಾಷ್ಟೇ ಅಲ್ಲ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲೂ ಸಂತಸ ತಂದಿದೆ.
ನಿಗಮದ ನೌಕರರ ಪುತ್ರನ ಸಾಧನೆಯನ್ನು ಕಂಡು ಪುಲಕಿತರಾಗಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಆನಂದಕುಮಾರ್’ಗೆ 1 ಲಕ್ಷ ರೂಪಾಯಿ ಪ್ರೋತ್ಸಾಹ ಧನದೊಂದಿಗೆ ಅಭಿನಂದನಾ ಪತ್ರ ನೀಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ನಮ್ಮ ಸಾರಿಗೆ ಸಿಬ್ಬಂದಿ ಮಕ್ಕಳು ವೈದ್ಯಕೀಯ, ಇಂಜಿನಿಯರಿಂಗ್, ವಿದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದು, ಆ ವಿದ್ಯಾರ್ಥಿಗಳಿಗೆ ಚೇತನ ಯೋಜನೆಯಡಿ ವಿದ್ಯಾರ್ಥಿ ವೇತನವನ್ನು ಐದರಿಂದ ಹತ್ತು ಪಟ್ಟು ಹೆಚ್ಚಳ ಮಾಡಿ ಪ್ರೋತ್ಸಾಹಿಸಲಾಗುತ್ತಿದೆ ಎಂದರು. ಮುಂದಿನ ದಿನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾರಿಗೆ ಸಂಸ್ಥೆಯ ಸಿಬ್ಬಂದಿ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಯಶಸ್ಸು ಸಾಧಿಸುವಂತಾಗಲಿ ಎಂದು ಆಶಿಸಿದರು.
ಭಾರತೀಯ ಆಡಳಿತ ಸೇವೆ (IAS) ಅಥವಾ ಭಾರತೀಯ ವಿದೇಶಾಂಗ ಸೇವೆ (IFS)ಗೆ ತಯಾರಿ ನಡೆಸಲು ಆನಂದ್ ಕುಮಾರ್’ಗೆ ಸಲಹೆ ನೀಡಿದರು.
ಸಾರಿಗೆ ಸಚಿವರ ಗೃಹ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಎಂ. ರಾಚಪ್ಪ, (ಹಿರಿಯ ಅಯ್ಕೆ ಶ್ರೇಣಿ), ರಾಯಚೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಶೇಖರ ಎಂ.ಎಸ್. ಹಾಗೂ ಆನಂದ್ ಕುಮಾರ್ ಕುಟುಂಬ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕೃಷಿ ವಿಶ್ವವಿದ್ಯಾಲಯದಿಂದಲ್ಲಿ ಬಿ.ಎಸ್ಸಿ (ಅಗ್ರಿ) ಪಡೆದಿರುವ ಆನಂದ ಕುಮಾರ್, ಯು.ಪಿ.ಎಸ್.ಸಿ – ಐ.ಎಫ್.ಎಸ್.ನಲ್ಲಿ 41ನೇ ರ‍್ಯಾಂಕ್ ಗಳಿಸಿ ತಮ್ಮ03ನೇ ಪ್ರಯತ್ನದಲ್ಲಿ ಯಶಸ್ಸು ಸಾಧಿಸಿದ್ದು ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ.