ಬೆಂಗಳೂರು: ಬೋಗಸ್ ಸಮೀಕ್ಷೆಗೆ ರಾಜ್ಯ ಸರ್ಕಾರ ಕೋಟ್ಯಂತರ ರೂಪಾಯಿ ದುಂದುವೆಚ್ಚ ಮಾಡಿದೆ ಎಂದು ಪ್ರತಿಪಕ್ಷ ಬಿಜೆಪಿ ಆಕ್ರೋಶ ಹೊರ ಹಾಕಿದೆ.
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಹಂಚಿಕೆ ಸಂಬಂಧ ನಡೆಯುತ್ತಿರುವ ಸಮೀಕ್ಷೆ ಸಂಪೂರ್ಣ ಬೋಗಸ್ ಎನ್ನುವುದಕ್ಕೆ ಮೇಲಿಂದ ಮೇಲೆ ಸಾಕ್ಷ್ಯ ಲಭಿಸುತ್ತಿದೆ. ಇದರ ಬೆನ್ನಲ್ಲೇ ಸಮೀಕ್ಷೆ ನೆಪದಲ್ಲಿ ಕಾಂಗ್ರೆಸ್ ಸರ್ಕಾರ ಕೋಟ್ಯಂತರ ಹಣ ದುಂದುವೆಚ್ಚ ಮಾಡುತ್ತಿರುವ ವರದಿ ಹೊರಬಂದಿದೆ ಎಂದು ಬಿಜೆಪಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿ ಗಂಭೀರ ಆರೋಪ ಮಾಡಿದೆ.
ರಾಜಧಾನಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಪರಿಶಿಷ್ಟ ಜಾತಿ ಸಮೀಕ್ಷೆ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಸಮೀಕ್ಷೆ ಖಾತರಿಪಡಿಸಿಕೊಳ್ಳುವ ಉದ್ದೇಶದಿಂದ ಮನೆ ಮನೆಗಳಿಗೆ ಸ್ಟಿಕ್ಕರ್ ಅಂಟಿಸಲು 3.60 ಕೋಟಿ ರೂ. ವೆಚ್ಚ ಮಾಡಲಾಗಿದೆ. ಈವರೆಗೂ ಬೆಂಗಳೂರು ನಗರದಲ್ಲಿ 60%ರಷ್ಟು ಕೂಡ ಸರ್ವೇ ನಡೆದಿಲ್ಲ. ಇನ್ನೂ ಕೆಲವೆಡೆ ಸಮೀಕ್ಷೆ ಮಾಡದೇ ಸ್ಟಿಕ್ಕರ್ ಅಂಟಿಸಿದ್ದಾರೆ. ಕೆಲವೆಡೆ ಬೇಕರಿ, ದಿನಸಿ ಅಂಗಡಿಗಳಿಗೂ ಸಮೀಕ್ಷೆ ಪೂರ್ಣ ಎಂಬ ಸ್ಟಿಕ್ಕರ್ ಅಂಟಿಸಲಾಗಿದೆ ಎಂದು ಬಿಜೆಪಿ ದೂರಿದೆ.
ಸಮೀಕ್ಷೆಯು ಸರ್ಕಾರದ ಕಣ್ಣೊರೆಸುವ, ಲೂಟಿ ಹೊಡೆಯುವ ತಂತ್ರವೇ ಹೊರತು ಇದರಲ್ಲಿ ಸರಿಯಾದ ಅಂಕಿ-ಅಂಶ ಸಿಗಲು ಸಾಧ್ಯವಿಲ್ಲ. ಹಾಗಾಗಿ ಯಾವ ಪುರುಷಾರ್ಥಕ್ಕಾಗಿ ಇಂತಹ ಕಾಟಾಚಾರದ ಸಮೀಕ್ಷೆ ಎಂದು ಮುಖ್ಯಮಂತ್ರಿಯನ್ನು ಪ್ರತಿಪಕ್ಷ ಪ್ರಶ್ನೆ ಮಾಡಿದೆ.
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಹಂಚಿಕೆ ಸಂಬಂಧ ನಡೆಯುತ್ತಿರುವ ಸಮೀಕ್ಷೆ ಸಂಪೂರ್ಣ ಬೋಗಸ್ ಎನ್ನುವುದಕ್ಕೆ ಮೇಲಿಂದ ಮೇಲೆ ಸಾಕ್ಷ್ಯ ಲಭಿಸುತ್ತಿದೆ. ಇದರ ಬೆನ್ನಲ್ಲೇ ಸಮೀಕ್ಷೆ ನೆಪದಲ್ಲಿ @INCKarnataka ಸರ್ಕಾರ ಕೋಟ್ಯಂತರ ಹಣ ದುಂದುವೆಚ್ಚ ಮಾಡುತ್ತಿರುವ ವರದಿ ಹೊರಬಂದಿದೆ.
ರಾಜಧಾನಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಪರಿಶಿಷ್ಟ ಜಾತಿ… pic.twitter.com/1IFiZQh1nV
— BJP Karnataka (@BJP4Karnataka) July 6, 2025