ಬೆಂಗಳೂರು: ಡಿಜಿಟಲ್ ಪಾವತಿಗಳಿಂದಾಗಿ ರಾಜ್ಯದ ಸಣ್ಣ ವ್ಯಾಪಾರಿಗಳಿಗೆ ತೆರಿಗೆ ನೋಟಿಸ್‌ಗಳು ಬಂದಿರುವ ಬಗ್ಗೆ ಎದ್ದಿರುವ ಕಳವಳಗಳಿಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ‘ಜಿಎಸ್‌ಟಿ ಕೇಂದ್ರ ಸರ್ಕಾರವು ಮಾಡಿದ ಕಾನೂನು, ಮತ್ತು ಜಿಎಸ್‌ಟಿ ಕೌನ್ಸಿಲ್ ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತದೆ. ರಾಜ್ಯ ಸರ್ಕಾರಗಳು ಇದಕ್ಕೆ ಜವಾಬ್ದಾರರಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರಾಜ್ಯದ ಸಣ್ಣ ವ್ಯಾಪಾರಿಗಳ ತೆರಿಗೆ ವಿಚಾರದಲ್ಲಿ ಕೇಂದ್ರ ಸರ್ಕಾರದೊಂದಿಗೆ ಸಮಾಲೋಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ರಾಜ್ಯದ ವಾಣಿಜ್ಯ ತೆರಿಗೆ ಇಲಾಖೆಯೊಂದಿಗೆ ಚರ್ಚೆ ನಡೆಸುತ್ತೇವೆ’ ಎಂದವರು ಭರವಸೆ ನೀಡಿದ್ದಾರೆ.