ಬೆಂಗಳೂರು: ಕರಾವಳಿ ಮಲೆನಾಡು ಸೇರಿದಂತೆ ರಾಜ್ಯದಲ್ಲಿ ಅಬ್ಬರದ ಮಳೆ ತಗ್ಗಿದೆ. ಆದರೆ ಆಗಸ್ಟ್ 12ರ ವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಮೈಸೂರು, ಬೆಳಗಾವಿ, ಧಾರವಾಡ, ಹಾವೇರಿ ಆ.4ರ ವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ತಜ್ಞರು ವಿಶ್ಲೇಷಿಸಿದ್ದಾರೆ.





































































