ಬೆಂಗಳೂರು: ಮೈಸೂರು ಡ್ರಗ್ಸ್ ಮಾಫಿಯಾ ಬಗ್ಗೆ ಎನ್‌ಐಎ ತನಿಖೆಗೆ ಆದೇಶಿಸುವಂತೆ ಬಿಜೆಪಿ ಆಗ್ರಹಿಸಿದೆ.
ಈ ಕುರಿತಂತೆ ಪ್ರತಿಕ್ರಿಯಿಸಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ್, ಮೈಸೂರಿನಲ್ಲಿ ಡ್ರಗ್ಸ್ ಮಾಫಿಯಾ ಬೆಳೆದಿದೆ. ಇದಕ್ಕೆ ಸರ್ಕಾರವೇ ಕಾರಣ. ಗೃಹ ಇಲಾಖೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇವೆಲ್ಲದರ ಪರಿಣಾಮವಾಗಿ ಇಂತಹ ಘಟನೆ ನಡೆದಿದೆ ಎಂದು ಆರೋಪಿಸಿದರು.
ಮಹಾರಾಷ್ಟ್ರದ ಪೊಲೀಸರು ಇಲ್ಲಿಗೆ ಬಂದು ಬಂಧನ ಮಾಡುವುದು ನಮ್ಮ ಪೊಲೀಸರಿಗೆ ಅಪಮಾನವಾಗಿದೆ. ಈ ಹಿಂದೆ ಆರ್‌ಸಿಬಿ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತವಾದಾಗ ಇಡೀ ಪೊಲೀಸ್ ಇಲಾಖೆಯ ಮೇಲೆ ತಪ್ಪು ಹೊರಿಸಲಾಯಿತು. ಇದರಿಂದಾಗಿ ಪೊಲೀಸರ ನೈತಿಕ ಸ್ಥೈರ್ಯ ಕುಸಿದಿದೆ. ಡ್ರಗ್ಸ್ ಮಾಫಿಯಾವನ್ನು ಎನ್‌ಐಎ ತನಿಖೆಗೆ ನೀಡಲಿ ಎಂದರು.
ಮೈಸೂರಿನ ರಿಂಗ್ ರಸ್ತೆಯಲ್ಲಿ ಪೊಲೀಸರು ಸದಾ ಓಡಾಡುತ್ತಾರೆ. ಆದರೂ ಈ ಘಟನೆ ತಿಳಿದುಬಂದಿಲ್ಲ. ಏಕೆಂದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯೇ ಇಲ್ಲ ಎಂದರು.