ಬೆಂಗಳೂರು: ಪಕ್ಷದ ನಾಯಕರ ಸೂಚನೆ ಮೇರೆಗೆ ಸಚಿವ ಸ್ಥಾನಕ್ಕೆ ಕೆ.ಎನ್. ರಾಜಣ್ಣ ರಾಜೀನಾಮೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ. ಆದರೆ, ಕಾಂಗ್ರೆಸ್ ಒಳಗಿನಲ್ಲಿ ನಡೆಯುತ್ತಿರುವ ರಾಜಕೀಯ ಸಮೀಕರಣ ಭಿನ್ನ ಚಿತ್ರಣವನ್ನೇ ನೀಡುತ್ತಿದೆ.
ಇತ್ತೀಚಿನ ದಿನಗಳಲ್ಲಿ ನಾಯಕತ್ವ ಬದಲಾವಣೆಯ ಕುರಿತು, ಜೊತೆಗೆ ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ನೀಡಿದ ಆರೋಪದ ಕುರಿತು ಪಕ್ಷಕ್ಕೆ ಮುಜುಗರ ಉಂಟಾಗುವ ಹೇಳಿಕೆಗಳನ್ನು ರಾಜಣ್ಣ ಮಾಡುತ್ತಿದ್ದರು.
ಈ ಹಿನ್ನೆಲೆಯಲ್ಲಿ, ರಾಜಣ್ಣ ಅವರನ್ನು ಸಂಪುಟದಿಂದ ಕೈಬಿಡುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದ್ದು, ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.