ಬೆಂಗಳೂರು: ರಾಜ್ಯ ಸರ್ಕಾರವು ಟ್ರಾಫಿಕ್ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಬಾಕಿ ಉಳಿದ ದಂಡ ಪಾವತಿಗೆ ಮತ್ತೊಮ್ಮೆ ಶೇ.50ರಷ್ಟು ರಿಯಾಯಿತಿ ನೀಡುವಂತೆ ಆದೇಶ ಹೊರಡಿಸಿದೆ.
ಆಗಸ್ಟ್ 23ರಿಂದ ಸೆಪ್ಟೆಂಬರ್ 12ರವರೆಗೆ ದಂಡ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್ ಅವರು ಈ ಕುರಿತಂತೆ ಅಧಿಕೃತ ಆದೇಶ ಹೊರಡಿಸಿದ್ದಾರೆ.
2023ರ ಫೆಬ್ರವರಿ 11ರೊಳಗೆ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಪ್ರಕರಣಗಳಿಗೆ ಮಾತ್ರ ಈ ಸಡಿಲಿಕೆ ಅನ್ವಯವಾಗಲಿದೆ. ಅನೇಕ ವರ್ಷಗಳಿಂದ ದಂಡ ಪಾವತಿಸದೇ ಬಾಕಿ ಉಳಿಸಿಕೊಂಡವರಿಗೆ ಈ ಅವಕಾಶ ದೊರಕಲಿದೆ.
2023ರ ಫೆಬ್ರವರಿ 12ರ ನಂತರ ದಾಖಲಾಗಿರುವ ಪ್ರಕರಣಗಳಿಗೆ ಮುಂದಿನ ವರ್ಷ ಇದೇ ರೀತಿಯ ರಿಯಾಯಿತಿ ನೀಡುವ ಸಾಧ್ಯತೆಗಳಿವೆ ಎಂದು ತಿಳಿಸಲಾಗಿದೆ.
ಮುಖ್ಯ ಅಂಶಗಳು:
ದಂಡ ಪಾವತಿಗೆ ಶೇ.50 ರಿಯಾಯಿತಿ
ಅವಧಿ: ಆಗಸ್ಟ್ 23 – ಸೆಪ್ಟೆಂಬರ್ 12
2023ರ ಫೆಬ್ರವರಿ 11ರವರೆಗಿನ ಪ್ರಕರಣಗಳಿಗೆ ಮಾತ್ರ ಅನ್ವಯ
ದೀರ್ಘಕಾಲ ಬಾಕಿ ಉಳಿದ ದಂಡ ಪಾವತಿಸಲು ‘ಗೋಲ್ಡನ್ ಚಾನ್ಸ್’
ಸಂಚಾರಿ ಇ- ಚಲನ್ ನಲ್ಲಿ ದಾಖಲಾಗಿರುವ ದಂಡ ಪ್ರಕರಣಗಳ, ಮೊತ್ತದಲ್ಲಿ ಶೇಕಡ 50 ರಷ್ಟು ರಿಯಾಯಿತಿ ನೀಡಿ ಆದೇಶ.
ಪೊಲೀಸ್ ಇಲಾಖೆಯ ಸಂಚಾರಿ ಇ -ಚಲನ್ ನಲ್ಲಿ ದಾಖಲಾದ ದಿನಾಂಕ:11.02.2023 ರ ವರೆಗಿನ ಪ್ರಕರಣಗಳಿಗೆ ಅನ್ವಯವಾಗುವಂತೆ, ಬಾಕಿ ಇರುವ ಪ್ರಕರಣಗಳ ದಂಡದ ಮೊತ್ತ ಪಾವತಿಯಲ್ಲಿ ಶೇಕಡಾ 50ರಷ್ಟು ರಿಯಾಯಿತಿ ನೀಡಿ ಆದೇಶ ಹೊರಡಿಸಿದ್ದು, pic.twitter.com/18besld0rR
— Bengaluru South District Police (@spblrsouth) August 21, 2025