ಬೆಂಗಳೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಾಟದಿಂದ ಆತ್ಮಹತ್ಯೆಗೆ ಶರಣಾದವರ ಕುಟುಂಬಗಳಿಗೆ ಮಾನವೀಯ ನೆಲೆಯಲ್ಲಿ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ವಿಧಾನಮಂಡಲ ಅಧಿವೇಶನದಲ್ಲಿ ಮಾಹಿತಿ ಹಂಚಿಕೊಂಡ ಸಿಎಂ, “ಮೈಕ್ರೋ ಫೈನಾನ್ಸ್‌ಗಳ ಹಾವಳಿ ತಡೆಗಟ್ಟಲು ಸರ್ಕಾರ ಈಗಾಗಲೇ ಕಠಿಣ ಕಾನೂನು ಜಾರಿಗೆ ತಂದಿದೆ. ಅದರ ಬಳಿಕ ಇಂತಹ ದೌರ್ಜನ್ಯ ಪ್ರಕರಣಗಳು ಹಾಗೂ ಆತ್ಮಹತ್ಯೆಗಳ ಪ್ರಮಾಣವು ಗಣನೀಯವಾಗಿ ಇಳಿಕೆಯಾಗಿದೆ” ಎಂದು ಹೇಳಿದರು.
ಮೈಕ್ರೋ ಫೈನಾನ್ಸಿಯರ್ ಗಳ ಕಾಟದಿಂದ ಮೃತಪಟ್ಟ, ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳಿಗೆ ಮಾನವೀಯ ನೆಲೆಯಲ್ಲಿ ತಲಾ 5 ಲಕ್ಷ ರೂಪಾಯಿ ಪರಿಹಾರ ಕೊಡಲಾಗುವುದು.
ಮೈಕ್ರೋ ಫೈನಾನ್ಸ್‌ಗಳ ಹಾವಳಿ ತಡೆಗಟ್ಟಲು ನಾವು ಕಠಿಣ ಕಾನೂನನ್ನು ಜಾರಿ ಮಾಡಿದ ನಂತರದಿಂದ ದೌರ್ಜನ್ಯ ಪ್ರಕರಣಗಳು ಹಾಗೂ ಆತ್ಮಹತ್ಯೆಗಳು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿವೆ ಎಂಬುದನ್ನು… pic.twitter.com/x5mq0ph80D
— Siddaramaiah (@siddaramaiah) August 21, 2025